ಫನಿ ಚಂಡಮಾರುತ ಎಫೆಕ್ಟ್: ಒಡಿಶಾದಲ್ಲಿ ನೀತಿ ಸಂಹಿತೆ ಹಿಂಪಡೆದ ಚುನಾವಣಾ ಆಯೋಗ!

ನಾಲ್ಕು ರಾಜ್ಯಗಳಲ್ಲಿ ವ್ಯಾಪಕ ಆತಂಕ ಸೃಷ್ಟಿ ಮಾಡಿರುವ ಪನಿ ಚಂಡಮಾರುತ ಒಡಿಶಾದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಒಡಿಶಾದಲ್ಲಿ ಈ ಹಿಂದೆ ಹೇರಲಾಗಿದ್ದ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭುವನೇಶ್ವರ್: ನಾಲ್ಕು ರಾಜ್ಯಗಳಲ್ಲಿ ವ್ಯಾಪಕ ಆತಂಕ ಸೃಷ್ಟಿ ಮಾಡಿರುವ ಪನಿ ಚಂಡಮಾರುತ ಒಡಿಶಾದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಒಡಿಶಾದಲ್ಲಿ ಈ ಹಿಂದೆ ಹೇರಲಾಗಿದ್ದ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ.
ಈ ಬಗ್ಗೆ ಸ್ಪತಃ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದ್ದು, ಒಡಿಶಾದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಅಗತ್ಯತೆ ಇರುವುದರಿಂದ ನೀತಿ ಸಂಹಿತೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯುತ್ತಿರುವುದಾಗಿ ಹೇಳಿದೆ.
ಪ್ರಮುಖವಾಗಿ ಒಡಿಶಾದ ಪುರಿ, ಜಗತ್ ಸಿಂಗ್ ಪುರ್, ಕೇಂದ್ರಪಾರ, ಭದ್ರಕ್, ಬಾಲಾಸೋರ್, ಮಯೂರ್ ಭಂಜ್, ಗಜಪತಿ, ಗಂಜಮ್, ಖೋರ್ದಾ, ಕಟಕ್ ಮತ್ತು ಜಾಜ್ಪುರ್ ನಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಒಡಿಶಾದಲ್ಲಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com