ಭೀಕರ ಸ್ವರೂಪದತ್ತ 'ಫನಿ' ಚಂಡಮಾರುತ, ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ!

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಭೀತಿ ಸೃಷ್ಟಿಸಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಭೀತಿ ಸೃಷ್ಟಿಸಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿ ಅನ್ವಯ ಇದೇ ಮೇ 3ರ ಶುಕ್ರವಾರದಂದು ಫನಿ ಚಂಡಮಾರುತ ಇನ್ನಷ್ಟು ತೀವ್ರ ಸ್ವರೂಪ ಪಡೆಯಲಿದ್ದು, ಫನಿ ಸೈಕ್ಲೋನ್​ ಅತ್ಯಂತ ಭೀಕರ ಸ್ವರೂಪದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಪ್ರಮುಖವಾಗಿ ಫನಿ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ಮೇಲೆ ಅಪ್ಪಳಿಸುವ ಸಾಧ್ಯತೆ ಇದ್ದ ಫನಿ ಚಂಡಮಾರುತ, ಮೊನ್ನೆ ತನ್ನ ದಿಕ್ಕು ಬದಲಿಸಿ ಬಂಗಾಳಕೊಲ್ಲಿ ಮಾರ್ಗವಾಗಿ ಒಡಿಶಾ ಕರಾವಳಿಯತ್ತ ನುಗ್ಗಿದೆ. ಇದೀಗ ತೀವ್ರ ಸ್ವರೂಪ ಪಡೆಯಲಿರುವ ಫನಿ ಚಂಡಮಾರುತ ಒಡಿಸ್ಸಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ರಣ ಭೀಕರ ಮಳೆ ಉಂಟು ಮಾಡಲಿದೆ ಎಂದು ತಿಳಿದುಬಂದಿದೆ. ಫನಿ ಚಂಡಮಾರುತ 195 ರಿಂದ 200 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದೇ ಕಾರಣಕ್ಕೆ ಈ ಮೂರು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈ ಮೂರು ರಾಜ್ಯಗಳ ಕರಾವಳಿ  ಪ್ರದೇಶಗಳಲ್ಲಿ ಎಸ್ ಡಿಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ತಂಡಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಿರುವಂತೆ ಹೇಳಲಾಗಿದೆ. ಅಲ್ಲದೆ ಕರಾವಳಿ ಭಾಗದ ನಿವಾಸಿಗಳಿಗೂ ಎಚ್ಚರಿಕೆ ರವಾನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com