ಕೇಜ್ರಿವಾಲ್ ಪತ್ನಿ ಬಳಿ 2 ವೋಟರ್ ಐಡಿ: ದೆಹಲಿ, ಯುಪಿ ಚುನಾವಣಾ ಆಯೋಗಕ್ಕೆ ಕೋರ್ಟ್ ಸಮನ್ಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎರಡು ವೋಟರ್ ಐಡಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಪತ್ನಿ
ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಪತ್ನಿ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎರಡು ವೋಟರ್ ಐಡಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಬುಧವಾರ ಉತ್ತರ ಪ್ರದೇಶ ಮತ್ತು ದೆಹಲಿ ಚುನಾವಣಾ ಆಯೋಗಕ್ಕೆ ಸಮನ್ಸ್ ಜಾರಿ ಮಾಡಿದೆ.
ಸುನೀತಾ ಕೇಜ್ರಿವಾಲ್ ಅವರು ಎರಡು ವೋಟರ್ ಐಡಿ ಹೊಂದಿದ್ದಾರೆ ಆರೋಪಿಸಿ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಅವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಶೈಫಲಿ ಬರ್ನಾಲ ಟಂಡನ್ ಅವರು, ಸುನೀತಾ ಕೇಜ್ರಿವಾಲ್ ಗೆ  ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಉತ್ತರ ಪ್ರದೇಶ ಮತ್ತು ದೆಹಲಿ ಚುನಾವಣಾ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.
ತೀಸ್ ಹಜಾರ್ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ. 
ಗಾಜಿಯಾಬಾದ್ ಲೋಕಸಭಾ ಕ್ಷೇತ್ರದ ಸಾಹಿಬಾದ್ ಹಾಗೂ ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎರಡು ಕಡೆ ಸುನೀತಾ ಅವರು ಮತದಾನ ಗುರುತು ಪತ್ರ ಹೊಂದಿದ್ದಾರೆ ಎಂದು ಖುರಾನಾ ಅವರು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com