ರಾಷ್ಟ್ರದ ಭದ್ರತೆ ಕಾಪಾಡುವಲ್ಲಿ ಬಿಜೆಪಿ ವಿಫಲ- ಅಖಿಲೇಶ್ ಯಾದವ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರದ ಭದ್ರತೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಖನೌ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರದ ಭದ್ರತೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಸರ್ಕಾರ ರಾಷ್ಟ್ರದ ಭದ್ರತೆ ವಿಚಾರದಲ್ಲಿ ಗಮನ ಹರಿಸಿದ ಹಿನ್ನೆಲೆಯಲ್ಲಿ ಗಡಿ ಪ್ರದೇಶ ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಮ್ಮ ಯೋಧರು ಬಲಿಯಾಗುತ್ತಿದ್ದಾರೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಒಂದು ವೇಳೆ ಬಿಜೆಪಿಯೇತರ ಸರ್ಕಾರ  ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಭದ್ರತೆಯೇ ಪ್ರಮುಖ ಅಜೆಂಡಾನಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, ರಾಷ್ಟ್ರೀಯ ಭದ್ರತೆ ಯಾವುದೇ ರಾಷ್ಟ್ರದ  ಪ್ರಮುಖ ವಿಚಾರವಾಗಿದೆ ಎಂದಿದ್ದಾರೆ.

ಪ್ರಾದೇಶಿಕ ಪಕ್ಷಗಳು ಜನರಿಗೆ ಹತ್ತಿರದಲ್ಲಿವೆ. ಪ್ರಾದೇಶಿಕ ಪಕ್ಷಗಳು ಉತ್ತಮ ಅನುಭವ ಹೊಂದಿದ್ದು, ಹಿಂದೆ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದಾರೆ.  ನನ್ನ ಜೀವನದ ಬಗ್ಗೆ ಜನರಿಗೆ ತಿಳಿಸುವ ಅಗತ್ಯವಿಲ್ಲ, ಸೈನಿಕ ಶಾಲೆಯಲ್ಲಿ ಏಳು ವರ್ಷ ಕಳೆದಿದ್ದೇನೆ, ಗಡಿಯಲ್ಲಿ ನನ್ನ ಕಾಲೇಜು ಸ್ನೇಹಿತರು ಹುತಾತ್ಮರಾಗಿದ್ದಾರೆ. ನನ್ನ ಹಂಡತಿ ತಂದೆ ಮಿಲಿಟರಿಯಲ್ಲಿ ಕೆಲಸ ಮಾಡಿದ್ದಾರೆ.  ನನ್ನ ಪತ್ನಿ  ತಂಗಿ, ಹಾಗೂ ಆಕೆಯ ಪತಿ ಸೇನೆಯಲ್ಲಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಬಿಜೆಪಿ ಕುಟುಂಬದಿಂದ ಎಷ್ಟು ಜನರು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕೇಳಲು ಇಷ್ಟಪಡುತ್ತೇನೆ. ಪರೇಡ್ ಮಾಡಲು ಯಾರಾದರೂ ಕರೆದರೆ, ನಾನು ಮಾಡುತ್ತೇನೆ ಎಂದಿರುವ ಅಖಿಲೇಶ್ , ಸೈನಿಕರ ಬಗ್ಗೆ ಮಾತನಾಡುವ ಬಿಜೆಪಿ ಪ್ರತಿನಿತ್ಯ ಒಬ್ಬೊಬ್ಬ ಯೋಧರು ಮೃತರಾಗುತ್ತಿರುವಾಗ ಎಂತಹ  ವಿಧದ ರಾಷ್ಟ್ರೀಯ ಭದ್ರತೆ ಅನುಸರಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com