ಸಿಬಿಎಸ್ ಇ ಫಲಿತಾಂಶ: ಶೇ.96 ಅಂಕ ಗಳಿಸಿದ ದೆಹಲಿ ಸಿಎಂ ಕೇಜ್ರಿವಾಲ್ ಪುತ್ರ

ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವುದು ಅಪರೂಪ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವುದು ಅಪರೂಪ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಪುತ್ರ ಪುಲ್ಕಿತ್‌ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಯಲ್ಲಿ ಶೇ. 96.4ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರು ಪುತ್ರನ ಫಲಿತಾಂಶ ಬಗ್ಗೆ ಟ್ವೀಟ್ ಮಾಡಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.
ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಎಂ ಕೇಜ್ರಿವಾಲ್ ಪುತ್ರನ ಸಾಧನೆಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸೇರಿ ಹಲವು ಸಚಿವರು ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.
2014ರಲ್ಲಿ ದಿಲ್ಲಿ ಮುಖ್ಯಮಂತ್ರಿ ಪುತ್ರಿ ಹರ್ಷಿತಾ ಸಹ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಯಲ್ಲಿ ಶೇ. 96ರಷ್ಟು ಅಂಕಗಳನ್ನು ಗಳಿಸಿದ್ದರು. ಬಳಿಕ, ಐಐಟಿ ಜಂಟಿ ಪ್ರವೇಶ ಪರೀಕ್ಷೆ ( ಜೆಇಇ) ಯಲ್ಲೂ ಪಾಸ್‌ ಆಗಿದ್ದರು.
ಮತ್ತೊಂದೆಡೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರ ಝೊಹರ್ ಸಹ ಶೇ. 91ರಷ್ಟು ಅಂಕಗಳನ್ನು ಗಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿದ ಸ್ಮೃತಿ ಇರಾನಿ ತಮ್ಮ ಪುತ್ರನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com