ಪ್ರಧಾನಿ ಮೋದಿ, ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ: ಮೇ 6 ರೊಳಗೆ ನಿರ್ಧರಿಸುವಂತೆ ಆಯೋಗಕ್ಕೆ 'ಸುಪ್ರೀಂ' ಸೂಚನೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ...
ನರೇಂದ್ರ ಮೋದಿ, ಅಮಿತ್ ಶಾ
ನರೇಂದ್ರ ಮೋದಿ, ಅಮಿತ್ ಶಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಲ್ಲಿಸಿರುವ 9 ದೂರುಗಳ ಬಗ್ಗೆ ಮೇ 6 ರೊಳಗೆ ನಿರ್ಧಾರ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ 11 ದೂರುಗಳ ಪೈಕಿ ಈಗಾಗಲೇ ಎರಡು ದೂರುಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಪೀಠಕ್ಕೆ ತಿಳಿಸಿದೆ.
ಈ ವೇಳೆ, ಉಳಿದ 9 ದೂರುಗಳನ್ನು ಸೋಮವಾರದೊಳಗೆ(ಮೇ 6) ಇತ್ಯರ್ಥಪಡಿಸುವಂತೆ ರಂಜನ್ ಗೊಗೊಯಿ ನೇತೃತ್ವದ ಸುಪ್ರೀಂ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಈ ಹಿಂದಿನ ವಿಚಾರಣೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ದಾಖಲಾಗಿರುವ ದೂರುಗಳ ಬಗ್ಗೆ ಪರಿಶೀಲಿಸಿ ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ಕೋರ್ಟ್ ನೋಟಿಸ್ ನೀಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com