200 ಕಿ.ಮೀ. ವೇಗದಲ್ಲಿ ಒಡಿಶಾ ತೀರಕ್ಕೆ ಅಪ್ಪಳಿಸಿದ 'ಫೊನಿ' ಚಂಡಮಾರುತ

ನಿರೀಕ್ಷೆಯಂತೆಯೇ ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ...
ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ ಫೊನಿ ಚಂಡಮಾರುತ
ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ ಫೊನಿ ಚಂಡಮಾರುತ
ಭುವನೇಶ್ವರ: ನಿರೀಕ್ಷೆಯಂತೆಯೇ ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ ಸ್ಥಗಿತವಾಗಿದೆ.
ಬರೊಬ್ಬರಿ ಪ್ರತೀ ಗಂಟೆಗೆ 200 ಕಿ.ಮೀ ವೇಗದಲ್ಲಿ ಫೊನಿ ಚಂಡಮಾರುತ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದು, ಅಲ್ಲಲ್ಲಿ ಭೂ ಕುಸಿತವಾದ ವರದಿಯಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.. ಚಂಡ ಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಮುಂಜಾನೆಯಿಂದಲೇ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 
ಇನ್ನು ಇಂದು ಮಧ್ಯಾಹ್ನದ ಹೊತ್ತಿಗೆ ಫೊನಿ ಚಂಡಮಾರುತ ಒಡಿಶಾ ಕರಾವಳಿಯ ಗೋಪಾಲಪುರ ಮತ್ತು ಚಾಂದಬಾಲಿ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 14 ಜಿಲ್ಲೆಗಳು ಹಾನಿ ಎದುರಿಸಲಿದ್ದು, ಅಪಾಯದ ಪ್ರದೇಶದ ನಿವಾಸಿಗಳ ತೆರವು ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಡಿಶಾದಲ್ಲಿ ಶನಿವಾರದವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೆಲ ಖಾಸಗಿ ಕಂಪನಿಗಳೂ ಕೂಡ ರಜೆ ಘೋಷಣೆ ಮಾಡಿವೆ.
ಇನ್ನು ಫೊನಿ ಪ್ರಭಾವ ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲೂ ಇರಲಿದೆ. ಆದರೆ ಕರ್ನಾಟಕದಲ್ಲಿ ಇದರ ಪರಿಣಾಮ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com