ಫೋನಿ ಚಂಡಮಾರುತ; ಒಡಿಶಾದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ!

ನಿನ್ನೆ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ್ದ ಫೋನಿ ಚಂಡಮಾರುತದ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಚು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭುವನೇಶ್ವರ: ನಿನ್ನೆ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ್ದ ಫೋನಿ ಚಂಡಮಾರುತದ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಚು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಒಡಿಶಾದಿಂದ ಇದೀಗ ಪಶ್ಚಿಮ ಬಂಗಾಳ ಮೂಲಕವಾಗಿ ಬಾಂಗ್ಲಾದೇಶದತ್ತ ಫೋನಿ ಚಂಡಮಾರುತ ಮುಖ ಮಾಡಿದ್ದು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದೆ. ಚಂಡಮಾರುತದ ಅಬ್ಬರಕ್ಕೆ ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ. ಹಲವೆಡೆ ಆಸ್ತಿಪಾಸ್ತಿ ನಷ್ಟವಾಗಿದೆ.
ಇನ್ನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸುಮಾರು 1 ಸಾವಿರ ಕೋಟಿ ಪರಿಹಾರ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನಿ ಮೋದಿ ಚಂಡಮಾರುತ ಪೀಡಿತ ರಾಜ್ಯಗಳಿಗೆ ಒಂದು ಸಾವಿರ ಕೋಟಿ ರೂ ಪರಿಹಾರ ನಿಧಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಫೋನಿ ಚಂಡಮಾರುತದಿಂದಾಗಿ ಲಕ್ಷಾಂತರ ಕುಟುಂಬಗಳು ಮನೆ ಕಳೆದುಕೊಂಡಿವೆ. ಹೀಗಾಗಿ ತಕ್ಷಣಕ್ಕೆ 1000 ಕೋಟಿ ಪರಿಹಾರ ಬಿಡುಗಡೆ ಮಾಡಿದ್ದೇವೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. 
ಇನ್ನು ಒಡಿಶಾದ 11 ಜಿಲ್ಲೆಗಳ​ 10 ಸಾವಿರ ಗ್ರಾಮಗಳಲ್ಲಿ ಫೋನಿ ಅಬ್ಬರಿಸಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಅಂತೆಯೇ ಪಶ್ಚಿಮ ಬಂಗಾಳದಲ್ಲೂ ಫೋನಿ ಅಬ್ಬರಿಸುತ್ತಿದ್ದು ಭಾರಿ ಮಳೆಯಾಗುತ್ತಿದೆ. ಬಳಿಕ ಚಂಡಮಾರುತ ಬಾಂಗ್ಸಾದೇಶದತ್ತ ನುಗ್ಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com