ಮೋದಿ ಸರ್ಕಾರಕ್ಕೂ ಮುನ್ನ ಸರ್ಜಿಕಲ್ ಸ್ಟ್ರೈಕ್ ನಡೆದಿವೆ: ಲೆಫ್ಟಿನೆಂಟ್ ಜನರಲ್ ಹೂಡಾ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೂ ಮುನ್ನ ಹಲವು ಸರ್ಜಿಕಲ್ ಸ್ಟ್ರೈಕ್ ಗಳು ನಡೆದಿವೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ...

Published: 04th May 2019 12:00 PM  |   Last Updated: 04th May 2019 07:54 AM   |  A+A-


Surgical strikes took place before Modi government too, says Lt Gen Hooda

ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ

Posted By : LSB LSB
Source : ANI
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೂ ಮುನ್ನ ಹಲವು ಸರ್ಜಿಕಲ್ ಸ್ಟ್ರೈಕ್ ಗಳು ನಡೆದಿವೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಅವರು ಶನಿವಾರ ಹೇಳಿದ್ದಾರೆ.

ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಹೂಡಾ ಅವರು, ಭಾರತೀಯ ಸೇನೆ ಈ ಹಿಂದೆಯೇ ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿದೆ. ಆದರೆ ಆ ದಾಳಿಗಳು ನಡೆದ ದಿನ ಮತ್ತು ಪ್ರದೇಶಗಳ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು 2016ರಲ್ಲಿ ಮೋದಿ ಸರ್ಕಾರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನೇತೃತ್ವವನ್ನು ವಹಿಸಿದ್ದ ಹೂಡಾ ಅವರು ಹೇಳಿದ್ದಾರೆ.

ಖಂಡಿತವಾಗಿಯೂ ಭಾರತೀಯ ಸೇನೆ ಈ ಹಿಂದೆ ಗಡಿ ನಿಯಂತ್ರಣ ರೇಖೆ ದಾಟಿ ಹಲವು ಕಾರ್ಯಾಚರಣೆಗಳನ್ನು ನಡೆಸಿದ.  ಈ ಕುರಿತು ಅಷ್ಟಾಗಿ ವರದಿಯಾಗುವುದಿಲ್ಲ. ಅಂತಹ ದಾಳಿಗಳು ಬೆಟಾಲಿಯನ್, ದಳ ಅಥವಾ ವಿಭಾಗೀಯ ಮಟ್ಟದಲ್ಲಿ ನಡೆಯುತ್ತವೆ ಎಂದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಜೆಪಿ ಮಾತ್ರ ಈ ಹಿಂದೆ ಯಾವುದೇ ಸರ್ಜಿಕಲ್ ದಾಳಿ ನಡೆದೇ ಇಲ್ಲ ಎಂದು ವಾದಿಸುತ್ತಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp