ಫೋನಿ ಚಂಡಮಾರುತ: ಒಡಿಶಾದಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಫೋನಿ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭುವನೇಶ್ವರ: ಫೋನಿ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು ದಿನಗಳ ಹಿಂದೆ ಒಡಿಶಾಗೆ ಅಬ್ಬರಿಸಿದ ಫೋನಿ ಚಂಡಮಾರುತದ ಅಬ್ಬರಕ್ಕೆ ಈ ವರೆಗೂ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಚಂಡಮಾರುತದ ಅಬ್ಬರಕ್ಕೆ ಒಡಿಶಾದ ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ವಿದ್ಯುತ್​ ಕಂಬಗಳು, ಮನೆಗಳು, ಗುಡಿಸಲುಗಳು, ಮರಗಳು ಧರೆಗುರುಳಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. 
ಇನ್ನು ಚಂಡಮಾರುತದಿಂದ ಉಂಟಾಗಿರುವ ಅನಾಹುತದ ಬಗ್ಗೆ ಒಡಿಶಾದ ಸಿಎಂ ನವೀನ್ ಪಾಟ್ನಾಯಕ್​ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನು ಚಂಡಮಾರುತದ ಬಳಿಕ ಪುರಿಯಲ್ಲಿ ವಿದ್ಯುತ್ ಸೇವೆ ಸ್ಥಗಿತವಾಗಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com