ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ  ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ಜಮ್ಮು- ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.

ಕೃಷ್ಣಾ ಘಾಟಿ ಗಡಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಸೆಲ್ ಹಾಗೂ  ಗುಂಡಿನ ದಾಳಿ ನಡೆಸಲಾಗಿದೆ. ಭಾರತೀಯ ಸೈನಿಕರು ಸೂಕ್ತ ಪ್ರತ್ಯುತ್ತರ ನೀಡಿದ್ದಾರೆ. ಆದರೆ, ಭಾರತೀಯ ಸೈನಿಕರು ಗಾಯಗೊಂಡಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಶಾಹಪುರ ಹಾಗೂ ಕಿರ್ಣಿ ಸೆಕ್ಟರ್  ಗುರಿಯಾಗಿರಿಸಿಕೊಂಡು ಗುರುವಾರ  ದಾಳಿ ನಡೆಸಿದ  ಪಾಕಿಸ್ತಾನ ಸೈನಿಕರು ಮಾರನೇ ದಿನ ಕ್ವಾಸ್ಬಾ ಸೆಕ್ಟರ್ ನಲ್ಲಿ ಗುಂಡಿನ ದಾಳಿ ನಡೆಸಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com