ಫೋನಿ ಸಮೀಕ್ಷೆಗೆ ಪಶ್ಚಿಮ ಬಂಗಾಳಕ್ಕೆ ಹೊರಟು ನಿಂತ ಮೋದಿ: ಅನುಮತಿ ನಿರಾಕರಿಸಿದ ದೀದಿ!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆಗೆ ಅನುಮತಿ ನೀಡಲು ಸಿಎಂ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.
ಫೋನಿ ಸಮೀಕ್ಷೆಗೆ ಬಂಗಾಳಕ್ಕೆ ಹೊರಟು ನಿಂತಿದ್ದ ಮೋದಿ: ಅನುಮತಿ ನಿರಾಕರಿಸಿದ ದೀದಿ!
ಫೋನಿ ಸಮೀಕ್ಷೆಗೆ ಬಂಗಾಳಕ್ಕೆ ಹೊರಟು ನಿಂತಿದ್ದ ಮೋದಿ: ಅನುಮತಿ ನಿರಾಕರಿಸಿದ ದೀದಿ!
ಕೋಲ್ಕತ್ತಾ: ಫೋನಿ ಚಂಡಮಾರುತಕ್ಕೆ ತುತ್ತಾಗಿರುವ ಒಡಿಶಾ ರಾಜ್ಯ ಸರ್ಕಾರ ಕೇಂದ್ರದ ಸಹಕಾರ ಪಡೆದು ಜನಜೀವನವನ್ನು ಸುಗಮಗೊಳಿಸಲು ಯತ್ನಿಸುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆಗೆ ಅನುಮತಿ ನೀಡಲು ಸಿಎಂ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.
ಪ್ರಧಾನಿ ಕಚೇರಿಯ ಮೂಲಗಳನ್ನು ಉಲ್ಲೇಖಿಸಿರುವ ಎಎನ್ಐ ವರದಿಯ ಪ್ರಕಾರ, ಒಡಿಶಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಫೋನಿ ಚಂಡಮಾರುತ ಪೀಡಿತ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಯೋಜನೆ ಹೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರಾಜ್ಯ  ಸರ್ಕಾರಕ್ಕೆ ಪತ್ರ ಬರೆದು ಅಧಿಕಾರಿಗಳೊಂದಿಗಿನ ಸಭೆಯ ಬಗ್ಗೆ ತಿಳಿಸಿದ್ದರು. 
ರಾಜ್ಯದ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯನ್ನು ಈಗ ನಡೆಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಪಿಎಂಒ ಅಧಿಕಾರಿಗಳ ಪತ್ರಕ್ಕೆ ಪ್ರತಿಕ್ರಿಯೆ ನೀಡಿದೆ. 
ಒಡಿಶಾಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಲ್ಲಿನ ರಾಜ್ಯಪಾಲರು, ಮುಖ್ಯಮಂತ್ರಿಗಳು ಸ್ವಾಗತಿಸಿದರು. ಸಿಎಂ, ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ಪ್ರಧಾನಿ ಒಡಿಶಾಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com