ಪ್ರತಿಪಕ್ಷಗಳಿಗೆ ಹಿನ್ನಡೆ: ವಿವಿ ಪ್ಯಾಟ್​ ಸಂಖ್ಯೆ ಹೆಚ್ಚಳಕ್ಕೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ಇವಿಯಂಗಳ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಬೇಕು ಎಂದು ಪ್ರತಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಇವಿಯಂಗಳ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಬೇಕು ಎಂದು ಪ್ರತಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣೆಗಳಲ್ಲಿ ಪ್ರತಿ ವಿಧಾನಸಭಾ ವಲಯದಲ್ಲಿ ಇವಿಎಂಗಳಿಗೆ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವಂತೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ 21 ವಿರೋಧ ಪಕ್ಷಗಳು ಸಲ್ಲಿಸಿದ್ದವು. ಮಂಗಳವಾರ ಬೆಳಗ್ಗೆ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ಅತ್ಯಂತ ಕಡಿಮೆ ಅವಧಿಯಲ್ಲಿ ವಿಚಾರಣೆ ಮುಗಿಸಿ, ನಾವು ಈ ಹಿಂದೆ ನೀಡಿರುವ ತೀರ್ಪನ್ನು ಬದಲಿಸಲು ಸಾಧ್ಯವಿಲ್ಲ, ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.
ಕಳೆದ ಏಪ್ರಿಲ್​ 8ರಂದು ಸುಪ್ರೀಂಕೋರ್ಟ್​, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಐದು ವಿಧಾನಸಭಾ ವಲಯದಲ್ಲಿ ಕನಿಷ್ಠ ಐದು ಕಡೆ ಇವಿಎಂಗಳೊಂದಿಗೆ ವಿವಿ ಪ್ಯಾಟ್ ಗಳನ್ನು ತಾಳೆ ಮಾಡುವ ವ್ಯವಸ್ಥೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಈ ಕುರಿತು 21 ವಿರೋಧ ಪಕ್ಷಗಳು  ಸುಪ್ರೀಂ ಕೋರ್ಟ್ ನಲ್ಲಿ ಮರು ಪರಿಶೀಲನಾ ಸಲ್ಲಿಸಿದ್ದವು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com