ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್ ಚಿಟ್ ವಿರೋಧಿಸಿ ಮಹಿಳಾ ವಕೀಲರಿಂದ ಪ್ರತಿಭಟನೆ

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆ
ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆ
ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಅವರಣದಲ್ಲಿ ಮಾಜಿ ಸುಪ್ರೀಂ ಕೋರ್ಟ್ ಮಹಿಳಾ ವಕೀಲರ ನೇತೃತ್ವದಲ್ಲಿ ಮಹಿಳಾ ವಕೀಲರು ಪ್ರತಿಭಟನೆ ನಡೆಸುತ್ತಿದ್ದು, ತ್ರಿಸದಸ್ಯ ಪೀಠದ ತೀರ್ಪಿನ ಮೂಲಕ ಸರ್ವೋಚ್ಛ ನ್ಯಾಯಾಲಯದಲ್ಲಿ ಮಹಿಳೆಗೆ ನ್ಯಾಯ ದೊರೆಯುತ್ತದೆ ಎಂಬ ನಮ್ಮ ವಿಶ್ವಾಸ ನಾಶವಾಗಿದೆ ಎಂದು ಮಹಿಳಾ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಪ್ರಸ್ತುತ ಸುಪ್ರೀಂ ಕೋರ್ಟ್ ಆವರಣದಲ್ಲಿ ಮಹಿಳಾ ವಕೀಲರ ಪ್ರತಿಭಟನೆಯಿಂದಾಗಿ ಪರಿಸ್ಥಿತಿ ಕೊಂಚ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಅಂತೆಯೇ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. 
ಇನ್ನು ನಿನ್ನೆಯಷ್ಚೇ  ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಆರೋಪ ಆಧಾರ ರಹಿತ ಎಂದು ವರದಿ ನೀಡಿತ್ತು. ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ರಿಸದಸ್ಯ ಪೀಠ ರದ್ದುಗೊಳಿಸಿತ್ತು. ಆ ಮೂಲಕ ಕಳೆದ 14 ದಿನಗಳಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದಿದ್ದ ಬೃಹತ್ ಪ್ರಹಸನಕ್ಕೆ ತ್ರಿಸದಸ್ಯ ಪೀಠ ತೆರೆ ಎಳೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com