ಪೌರತ್ವ ವಿವಾದ: ರಾಹುಲ್ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಕೋರಿಕೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೌರತ್ವ ವಿವಾದ ಇತ್ಯರ್ಥಗೊಳ್ಳುವವರೆಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ದೇಶಿಸುವಂತೆ ಕೋರಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಪೌರತ್ವ ವಿವಾದ ಇತ್ಯರ್ಥಗೊಳ್ಳುವವರೆಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರನ್ನೊಳಗೊಂಡ ಏಕ ಸದಸ್ಯ ಪೀಠ , ಈ ಅರ್ಜಿಯನ್ನು ವಜಾಗೊಳಿಸಿದ್ದು, 2005-06ರಲ್ಲಿ ಇಂಗ್ಲೆಂಡ್ ಮೂಲದ ಕಂಪನಿಯ ವಾರ್ಷಿಕ ಮಾಹಿತಿಯನ್ನೊಳಗೊಂಡ ಫಾರಂನಲ್ಲಿ ರಾಹುಲ್ ಗಾಂಧಿ ಬ್ರಿಟಿಷನ್ ಪ್ರಜೆ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಕೆಲ ಕಂಪನಿಗಳು ಕೆಲ ಫಾರಂನಲ್ಲಿ ಬ್ರಿಟಿಷ್ ಪ್ರಜೆ ಎಂದು ಹೇಳಲಾಗಿದೆ, ಆದರೆ, ಅವರು ಬ್ರಿಟಿಷ್ ಪ್ರಜೆಯಾಗುತ್ತಾರೆಯೇ ಎಂದು  ನ್ಯಾಯಾಧೀಶರಾದ ದೀಪಕ್ ಗುಪ್ತಾ ಹಾಗೂ ಸಂಜಿವ್ ಖಾನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿದಾರರು ನ್ಯಾಯಪೀಠ ಪ್ರಶ್ನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com