3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ಬಿಸಿ

ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಮೂರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರವನ್ನು ಪ್ರತಿಭಟಿಸಿ ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ.
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ಬಿಸಿ
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ಬಿಸಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಮೂರು ವರ್ಷದ ಬಾಲಕಿಯ  ಮೇಲೆ ನಡೆದ ಅತ್ಯಾಚಾರವನ್ನು ಪ್ರತಿಭಟಿಸಿ ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಕೆಲವೆಡೆ ಜನರು ಆಕ್ರೋಶಗೊಂಡು ಅಂಗಡಿ ಮುಂಗಟ್ಟನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ.
ಬಂಡಿಪೊರಾ, ಸೊಪೋರ್, ಬದ್ಗಮ್ ಮತ್ತು ಬಾರಾಮುಲ್ಲಾ ಪಟ್ಟಣಗಳಲ್ಲಿ  ಅಂಗಡಿ ಮುಂಗಟ್ಟು, ವ್ಯಾಪಾರ ವ್ಯವಹಾರ ಬಂದ್ ಆಗಿದೆ.ರಂಜಾನ್ ಮಾಸವಾಗಿದ್ದು ಮುಸ್ಲಿಂ ಬಹುಸಂಖ್ಯಾತವಾಗಿರುವ ಶ್ರೀನಗರದಲ್ಲಿ ಇದು ಭಾಗಷಃ ಪರಿಣಾಮ ಬೀರಿದೆ.
ಅತ್ಯಾಚಾರ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಸ್ಥಳೀಯ ಶಾಲಾ, ಕಾಲೇಜುಗಳು ಬಂದ್ ಆಗಿದೆ. ಸಾರಿಗೆ ವ್ಯವಸ್ಥೆಯ ಮೇಲೆ ಸಹ ಬಂದ್, ಪ್ರತಿಭಟನೆಗಳು ಪರಿಣಾಮ ಬೀರಿದೆ. ಆದರೆ ಸರ್ಕಾರಿ ಕಛೇರಿಗಳು, ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವಾರ ಮೂರು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದರು. ಇದನ್ನು ಖಂಡಿಸಿ ರಾಜ್ಯ ರಾಜಧಾನಿ ಮತ್ತು ಇತರ ಸ್ಥಳಗಳಲ್ಲಿ ಬೀದಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಕಾಶ್ಮೀರ ವಿಶ್ವವಿದ್ಯಾಲಯ, ಕೇಂದ್ರೀಯ ವಿಶ್ವವಿದ್ಯಾನಿಲಯ ಮತ್ತು ಇಸ್ಲಾಮಿಕ್ ಯುನಿವರ್ಸಿಟಿ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿಪ್ರತಿಭಟನೆಗಳನ್ನು ನಡೆಸಿದರು. ಹೈಕೋರ್ಟ್ ಬಾರ್ ಅಸೋಸಿಯೇಶನ್ನ ಸದಸ್ಯರು ನ್ಯಾಯಾಲಯದ ಕಾರ್ಯಕಲಾಪವನ್ನು ಬಹಿಷ್ಕರಿಸಿದ್ದಾರೆ. 
ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ, ಪ್ರತ್ಯೇಕತಾವಾದಿ ಮುಖಂಡರು ಮತ್ತು ಹಲವಾರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಸಂಘಟನೆಗಳ ಪ್ರಮುಖರು ಘಟನೆ ಕುರಿತಂತೆ ಆಘಾತ ವ್ಯಕತಪಡಿಸಿದ್ದಾರೆ. 
ಮೇ 9 ರಂದು ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಸುಂಬಲ್ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com