ಮೊದಲ ಭಯೋತ್ಪಾದಕ ಹಿಂದೂ ಎಂದ ಕಮಲ್ ಹಾಸನ್ ನಾಲಿಗೆ ಕಟ್ ಮಾಡಬೇಕು: ಎಐಎಡಿಎಂಕೆ ಸಚಿವ

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಟ ಹಾಗೂ ಮಕ್ಕಳ ನೀಧಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರ...

Published: 13th May 2019 12:00 PM  |   Last Updated: 13th May 2019 08:45 AM   |  A+A-


Haasan's tongue should be cut off: AIADMK Min

ಕಮಲ್ ಹಾಸನ್

Posted By : LSB LSB
Source : PTI
ಚೆನ್ನೈ: ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಟ ಹಾಗೂ ಮಕ್ಕಳ ನೀಧಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರ ನಾಲಿಗೆ ಕತ್ತರಿಸಬೇಕು ಎಂದು ತಮಿಳುನಾಡು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಅವರು ಹೇಳಿದ್ದಾರೆ.

ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ ಪಕ್ಷವನ್ನು ನಿಷೇಧಿಸಬೇಕು ಎಂದಿರುವ ಎಐಎಡಿಎಂಕೆ ಹಿರಿಯ ನಾಯಕ ಬಾಲಾಜಿ ಅವರು, ಕಮಲ್ ಹಾಸನ್ ವಿರುದ್ಧ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಭಯೋತ್ಪಾದನೆಗೆ ಹಿಂದೂ, ಕ್ರಿಶ್ಚಿಯನ್ ಅಥವಾ ಮುಸ್ಲಿಂ ಎಂಬ ಯಾವುದೇ ಧರ್ಮ ಇಲ್ಲ. ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ದೇಶದ ಮೊದಲ ಹಿಂದೂ ಭಯೋತ್ಪಾದಕ ಎಂದ ಕಮಲ್ ಹಾಸನ್ ಅವರ ನಾಲಿಕೆ ಕಟ್ ಮಾಡಬೇಕು ಎಂದಿದ್ದಾರೆ.

ಅಲ್ಪ ಸಂಖ್ಯಾತ ಮತಗಳನ್ನು ಸೆಳೆಯುವುದಕ್ಕಾಗಿ ಕಮಲ್ ಹಾಸನ್ ಅವರು ಈ ರೀತಿ ನಟಿಸುತ್ತಿದ್ದಾರೆ ಮತ್ತು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಾಲಾಜಿ ವಾಗ್ದಾಳಿ ನಡೆಸಿದರು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp