ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.
ಕಮಲ್ ಹಾಸನ್
ಕಮಲ್ ಹಾಸನ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮೆಟ್ರೋಪಾಲಿಟಿಯನ್ ಮ್ಯಾಜಿಸ್ಟ್ರೇಟ್ ಸುಮೀತ್ ಆನಂದ್ ಮುಂದೂಡಿದ್ದಾರೆ. ಆಗ ದೂರುದಾರ ವಿಷ್ಣುಗುಪ್ತ ಅವರ ಹೇಳಿಕೆಯನ್ನು ಪಡೆಯಲಾಗುತ್ತದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್  153-ಎ (ಧರ್ಮ, ಜನಾಂಗ, ಭಾಷೆ ಮುಂತಾದ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295-ಎ (ಧರ್ಮವನ್ನು ಅವಮಾನಿಸುವ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗಬಹುದಾದ ಅಪರಾಧಗಳಡಿಯಲ್ಲಿ ಕಮಲ್ ಹಾಸನ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಎರಡು ಸೆಕ್ಷನ್ ಗಳ ಅಡಿಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಅಥವಾ ದಂಡವನ್ನು ವಿಧಿಸಲು ಅವಕಾಶವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com