ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

Published: 16th May 2019 12:00 PM  |   Last Updated: 16th May 2019 11:52 AM   |  A+A-


Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್

Posted By : SVN SVN
Source : ANI
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

ಪುಲ್ವಾಮ ಜಿಲ್ಲೆಯ ದಲಿಪೋರಾದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಉಗ್ರರಿದ್ದ ಮನೆಯನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳನ್ನು ನೋಡುತ್ತಲೇ ಸೈನಿಕರ ಮೇಲೆ ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸೇನಾಪಡೆಯ ಓರ್ವ ಯೋಧನಿಗೆ ಗುಂಡೇಟು ತಗುಲಿದ್ದು, ಕೂಡಲೇ ಅವರನ್ನು ಸೇನಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಸೇನಾಪಡೆಗಳು ಕೂಡ ಭಾರಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿದ್ದ ಉಗ್ರರ ಪೈಕಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮನೆಯಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ದಲಿಪೋರಾ ಪ್ರಾಂತ್ಯದ ಸುತ್ತಮುತ್ತ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp