'ನ್ಯಾಯ' ಸಿಗಲಿದೆ: ಆಳ್ವಾರ್ ಗ್ಯಾಂಗ್ ರೇಪ್ ಸಂತ್ರಸ್ಥರ ಭೇಟಿ ಬಳಿಕ ರಾಹುಲ್ ಗಾಂಧಿ ಹೇಳಿಕೆ

ರಾಜಸ್ತಾನದ ಆಳ್ವಾರ್ ನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತ್ರಸ್ಥರನ್ನು ಇಂದು ಭೇಟಿ ಮಾಡಿ ಚರ್ಚಿಸಿದ್ದಾರೆ.
ಸುದ್ದಿಗೋಷ್ಛಿಯಲ್ಲಿ ರಾಹುಲ್ ಗಾಂಧಿ
ಸುದ್ದಿಗೋಷ್ಛಿಯಲ್ಲಿ ರಾಹುಲ್ ಗಾಂಧಿ
ಜೈಪುರ: ರಾಜಸ್ತಾನದ ಆಳ್ವಾರ್ ನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತ್ರಸ್ಥರನ್ನು ಇಂದು ಭೇಟಿ ಮಾಡಿ ಚರ್ಚಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಚಾರ ತಿಳಿಯುತ್ತಿದ್ದಂತೆಯೇ ನಾನು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್ ರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೆ. ಅಲ್ಲದೆ ಆರೋಪಿಗಳ ವಿರುದ್ಧಕಠಿಣ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೆ. ಸಂತ್ರಸ್ಥ ಕುಟುಂಬಸ್ಥರು ಭಯ ಪಡುವುದು ಬೇಡ. ನಾವು ಅವರೊಂದಿಗೆ ಇದ್ದೇವೆ. ಅವರಿಗೆ ಖಂಡಿತಾ ನ್ಯಾಯ ಸಿಗಲಿದೆ ಎಂದು ಹೇಳಿದರು.
ಕಳೆದ ಏಪ್ರಿಲ್ 26ರಂದು ರಾಜಸ್ಛಾನದ ಆಳ್ವಾರ್ ನಲ್ಲಿ ತನ್ನ ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯನ್ನು ಆಕೆಯ ಗಂಡನ ಮುಂದೆಯೇ ದುಷ್ಕರ್ಮಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು. ಆಳ್ನಾರ್ ನ ಥನಗಾಜಿ-ಳ್ವಾರ್ ಬೈಪಾಸ್ ರೋಡಿನಲ್ಲಿ ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಮತ್ತು ಆಕೆಯ ಗಂಡನನ್ನು ಎಳೆದೊಯ್ದ ದುಷ್ಕರ್ಮಿಗಳು ಪತಿಯನ್ನು ಕಟ್ಟಿಹಾಕಿ ಆತನ ಮುಂದೆಯೇ ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ್ದರು. ಅಲ್ಲದೆ ದುಷ್ಕರ್ಮಿಯೋರ್ವ ತನ್ನ ಮೊಬೈಲ್ ನಲ್ಲಿ ಅತ್ಯಾಚಾರದ ವಿಡಿಯೋ ಮಾಡಿದ್ದ. ಈ ವಿಡಿಯಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಪ್ರಕರಣದ ಕುರಿತು ವ್ಯಾಪಕ ಚರ್ಚೆಯಾಯಿತು. 
ಅಂತೆಯೇ ಈ ಘಟನೆ ನಡೆದ 6 ದಿನಗಳ ಬಳಿಕ ಈ ಪ್ರಕರಣದ ಕುರಿತು ಎಫ್ ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ಅತ್ಯಾಚಾರವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾತ ಕೂಡ ಸೇರಿದ್ದಾನೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com