ಉನ್ನಾವೋ: ಟ್ರ್ಯಾಕ್ಟರ್ -ಬಸ್ ಡಿಕ್ಕಿ, ಆರು ಮಂದಿ ಸಾವು; 30 ಮಂದಿಗೆ ಗಾಯ

ವೇಗವಾಗಿ ಬಂದ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ರಾಷ್ಟ್ರೀಯ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಉನ್ನಾವೋ: ವೇಗವಾಗಿ ಬಂದ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ದೆಹಲಿಯಿಂದ ಬಿಹಾರಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಟ್ರ್ಯಾಕ್ಟರ್ ಬಂಡಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆ ದೇವ್ ಖಾರಿ ಗ್ರಾಮದ ಸಮೀಪ ಸಂಭವಿಸಿದ್ದು, ಇದು ಬಾಂಗಾರ್ ಮಾವೌ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದೆ
.
ಗಾಯಗೊಂಡಿದ್ದ ಜನರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com