ಸೋನಿಯಾ ಭೇಟಿ ಮಾಡಿದ ಚಂದ್ರಬಾಬು ನಾಯ್ಡು, ಪ್ರತಿಪಕ್ಷಗಳ ಮುಖಂಡರೊಂದಿಗೆ ಮಾತುಕತೆ

ಆಂಧ್ರಪ್ರದೇಶ ಮುಖ್ಯಮಂತ್ರಿ ಎಂ. ಚಂದ್ರಬಾಬು ನಾಯ್ಡು ಇಂದು ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಗಾಂಧಿ, ಶರದ್ ಪವಾರ್ ಮತ್ತಿತರ ಪ್ರತಿಪಕ್ಷಗಳ ನಾಯಕರೊಂದಿಗೆ ಬಿಜೆಪಿಯೇತರ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದ್ದಾರೆ.
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ  ಎಂ. ಚಂದ್ರಬಾಬು ನಾಯ್ಡು ಇಂದು ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಗಾಂಧಿ, ಶರದ್ ಪವಾರ್ ಮತ್ತಿತರ ಪ್ರತಿಪಕ್ಷಗಳ ನಾಯಕರೊಂದಿಗೆ ಬಿಜೆಪಿಯೇತರ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದ್ದಾರೆ.

ಶುಕ್ರವಾರ ರಾತ್ರಿಯೇ  ದೆಹಲಿಗೆ ಆಗಮಿಸಿರುವ ಚಂದ್ರಬಾಬು ನಾಯ್ಡು , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಪಿಸಿ ನಾಯಕ ಶರದ್ ಪವರ್, ಎಲ್ ಜೆಡಿ ನಾಯಕ ಶರದ್ ಪವರ್ , ಹಾಗೂ ಎಡಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ನಂತರ ಲಖನೌಗೆ ಆಗಮಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

 ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ ಸಂಬಂಧ ಎಲ್ಲಾ ಪ್ರತಿಕ್ಷಗಳನ್ನು ಒಂದೇ ವೇದಿಕೆಗೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿರುವುದಾಗಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com