ಕಾಂಗ್ರೆಸ್ ಸಾಯಬೇಕು: ಎಕ್ಸಿಟ್ ಪೋಲ್ ಸಮೀಕ್ಷೆ ನಂತರ ಯೋಗೇಂದ್ರ ಯಾದವ್ ಪ್ರತಿಕ್ರಿಯೆ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ...
ಯೋಗೇಂದ್ರ ಯಾದವ್
ಯೋಗೇಂದ್ರ ಯಾದವ್
ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸಾಯಲೇಬೇಕು ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾರೆ.
ಭಾರತದ ಇತಿಹಾಸದಲ್ಲಿ ಕಾಂಗ್ರೆಸ್ ಒಳ್ಳೆಯ ಪಾತ್ರವೇ ಇಲ್ಲ, ದೇಶವನ್ನು ಬಿಜೆಪಿಯಿಂದ ರಕ್ಷಿಸಲಾಗದ ಕಾಂಗ್ರೆಸ್ ಖಂಡಿತ ಸಾಯಬೇಕು ಎಂದು ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.
ಚಾಣಕ್ಯ, ಸಿ-ವೋಟರ್ ಸೇರಿದಂತೆ 10ಕ್ಕೂ ಹೆಚ್ಚು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಗೊಳಿಸಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರದತ್ತ ದಾಪುಗಾಲಿರಿಸುವ ಸಾಧ್ಯತೆ ಎಂದು ಹೇಳಲಾಗಿದೆ.
ಈ ಹಿಂದೆ ಚುನಾವಣೆ ಘೋಷಣೆಯಾದ ಬಳಿಕ ಅಬ್ಬರ ಪ್ರಚಾರದ ನಡೆಸಿದ್ದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಅಧಿಕಾರದ ಕನಸು ಕಾಣುತ್ತಿವೆ. ಆದರೆ ಪ್ರಸ್ತುತ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಕುರಿತು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com