ಕಾಂಗ್ರೆಸ್‌ಗೆ ಮುಖಭಂಗ: ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೆ 2016ರಲ್ಲಿ; ಲೆಫ್ಟಿನಂಟ್ ಜನರಲ್

ಯುಪಿಎ ಸರ್ಕಾರವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಕಾಂಗ್ರೆಸ್ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಹೇಳಿಕೊಂಡಿದ್ದು ಇದಕ್ಕೆ ಸ್ಪಷ್ಟನೆ ನೀಡಿರುವ...

Published: 20th May 2019 12:00 PM  |   Last Updated: 20th May 2019 08:30 AM   |  A+A-


Ranbir Singh

ರಣ್ಬೀರ್ ಸಿಂಗ್

Posted By : VS VS
Source : Online Desk
ನವದೆಹಲಿ: ಯುಪಿಎ ಸರ್ಕಾರವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಕಾಂಗ್ರೆಸ್ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಹೇಳಿಕೊಂಡಿದ್ದು ಇದಕ್ಕೆ ಸ್ಪಷ್ಟನೆ ನೀಡಿರುವ ಉತ್ತರ ಕಮಾಂಡ್ ಜನರಲ್ ಆಫೀಸರ್ ಕಮಾಂಡಿಂಗ್(ಜಿಒಸಿ) ರಣ್ಬೀರ್ ಸಿಂಗ್ ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೆ 2016ರಲ್ಲಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿದ್ದ 2016ರಲ್ಲಿ ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು. ಇದಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ರಣ್ಬೀರ್ ಸಿಂಗ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಫೆಬ್ರವರಿ 14ರಂದು ನಡೆದಿದ್ದ ಉಗ್ರ ದಾಳಿಯಲ್ಲಿ ಭಾರತೀಯ ಸೇನೆಯ 44 ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಕೋಟ್ ಸೇರಿದಂತೆ ಇತರ ಕಡೆ ಭಯೋತ್ಪದಾಕರ ಶಿಬಿರಗಳ ಮೇಲೆ ಏರ್ ಸ್ಟ್ರೈಕ್ ನಡೆಸಿತ್ತು. 

ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬಳಸಿಕೊಂಡಿದ್ದರು. ಇದನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ನಾಯಕರು ಯುಪಿಎ ಸರ್ಕಾರದವಧಿಯಲ್ಲಿ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಹೇಳಿಕೊಂಡಿದ್ದರು. ಆದರೆ ಇದೀಗ ಸೇನಾ ಕಮಾಂಡರ್ ಸ್ಪಷ್ಟನೆಯಿಂದ ಕಾಂಗ್ರೆಸ್ ನ ಆರೋಪಗಳಿಗೆ ತಪರಾಕಿ ನೀಡಲು ಬಿಜೆಪಿಗೆ ಅವಕಾಶ ಸಿಕ್ಕಂತಾಗಿದೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp