ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ಪಿಡಿಪಿ ಕಾರ್ಯಕರ್ತ ಬಲಿ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

Published: 20th May 2019 12:00 PM  |   Last Updated: 20th May 2019 12:03 PM   |  A+A-


Terrorists shot at a political worker Mohd Jamal in Zangalpora area of Kulgam

ಸಂಗ್ರಹ ಚಿತ್ರ

Posted By : SVN SVN
Source : ANI
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಈ ಘಟನೆ ನಡೆದಿದ್ದು, ಮೃತ ಕಾರ್ಯಕರ್ತನನ್ನು ಮೊಹಮದ್ ಜಮಾಲ್ ಎಂದು ಗುರುತಿಸಲಾಗಿದೆ. ಕುಲ್ಗಾಮ್ ಜಿಲ್ಲೆಯ ಝಂಗಾಲ್ ಪೋರಾ ಗ್ರಾಮದಲ್ಲಿ ಕಾರ್ಯ ನಿರತನಾಗಿದ್ದ ಝಮಾಲ್ ನನ್ನು ಬೈಕ್ ನಲ್ಲಿ ಬಂದ ಉಗ್ರರು ಗುಂಡಿಟ್ಟು ಪರಾರಿಯಾಗಿದ್ದಾರೆ.

ಕೂಡಲೇ ಸ್ಥಳೀಯರು ಝಮಾಲ್ ನನ್ನು ಆಸ್ಪತ್ರೆ ಸೇರಿಸಿದರಾದರೂ, ಅಷ್ಟು ಹೊತ್ತಿಗಾಗಲೇ ಝಮಾಲ್ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಮೃತ ಝಲಾಲ್ ಪಿಡಿಪಿ ಕಾರ್ಯಕರ್ತ ಎನ್ನಲಾಗಿದೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಒಮರ್ ಅಬ್ದುಲ್ಲಾ, ಸರಣಿ ಹತ್ಯೆಗೆ ಮತ್ತೊಂದು ಬಲಿಯಾಗಿದ್ದು, ಘಟನೆಯನ್ನು ಕಟು ಶಬ್ಧಗಳಿಂದ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Stay up to date on all the latest ರಾಷ್ಟ್ರೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp