ರಾಜೀವ್ ಗಾಂಧಿ ಪುಣ್ಯ ಸ್ಮರಣೆ, ನೀವು ಯಾವಾಗಲೂ ನನ್ನ ಹೀರೋ- ಪ್ರಿಯಾಂಕಾ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳ ವೀರಭೂಮಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುಷ್ಪ ನಮನ ಸಲ್ಲಿಸಿದರು.

Published: 21st May 2019 12:00 PM  |   Last Updated: 21st May 2019 12:23 PM   |  A+A-


Sonia Gandhi, Rahul, Priyanka

ಸೋನಿಯಾಗಾಂಧಿ, ರಾಹುಲ್ , ಪ್ರಿಯಾಂಕಾ

Posted By : ABN ABN
Source : PTI
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳ ವೀರಭೂಮಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ  ಪುಷ್ಪ ನಮನ ಸಲ್ಲಿಸಿದರು.

ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನೀವು ಯಾವಾಗಲೂ ನನ್ನ ಹಿರೋ ಎಂದಿದ್ದಾರೆ.  ಅಲ್ಲದೇ,  ಹರಿವಂಶ ರೈ ಬಚ್ಚನ್ ಅವರ ಅಗ್ನಿಪಥ್ ಕವಿತೆಯ ಸಾಲುಗಳೊಂದಿಗೆ ರಾಜೀವ್ ಗಾಂಧಿ ಜೊತೆಯಲ್ಲಿರುವ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.


ಪ್ರಿಯಾಂಕಾ ಗಾಂಧಿ 19 ವರ್ಷದವರಿದ್ದಾಗ 1991 ಮೇ 21 ರಂದು ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು.  

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ , ರಾಜೀವ್ ಗಾಂಧಿಗೆ ನಮನ ಸಲ್ಲಿಸಿದ್ದಾರೆ. 1944 ಆಗಸ್ಟ್ 20 ರಂದು ಜನಿಸಿದ ರಾಜೀವ್ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ತಮಿಳುನಾಡಿನ ಪೆರಂಬೂದೂರಿನಲ್ಲಿ ಮೇ 21,1991ರಲ್ಲಿ ಎಲ್ ಟಿಟಿಇ ಆತ್ಮಾಹುತಿ ಬಾಂಬರ್ ದಾಳಿಯಿಂದ ಮೃತಪಟ್ಟಿದ್ದ ರಾಜೀವ್ ಗಾಂಧಿ ಅವರನ್ನು ಯಮುನಾ ನದಿಯ ದಡದ ಮೇಲಿನ ವೀರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp