'ಖೂನ್ ಕಿ ದಲ್ಲಾಳಿ' ಹೇಳಿಕೆ: ರಾಹುಲ್ ವಿರುದ್ಧ ಎಫ್ಐಆರ್ ದಾಖಲಾತಿಗೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ 'ರಕ್ತದ ದಲ್ಲಾಳಿ'ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...
ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 'ರಕ್ತದ ದಲ್ಲಾಳಿ' ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ದೂರಿಗೆ ಸಂಬಂಧಪಟ್ಟ ಆದೇಶವನ್ನು ದೆಹಲಿ ಕೋರ್ಟ್ ಜೂನ್ 7ಕ್ಕೆ ಕಾಯ್ದಿರಿಸಿದೆ.
ಅಡ್ವೊಕೇಟ್ ಜೋಗಿಂದರ್ ತುಲಿ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ತೀರ್ಪನ್ನು ಕಾಯ್ದಿರಿಸಿದ್ದಾರೆ. 2016ರಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಸರ್ಜಿಕಲ್ ಸ್ಟ್ರೈಕ್ ಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಮಾಡಿದ್ದ 'ರಕ್ತದ ದಲ್ಲಾಳಿ' ಆರೋಪಕ್ಕೆ ಸಂಬಂಧಪಟ್ಟಂತೆ ಪೊಲೀಸರು ಎಫ್ಐಆರ್ ದಾಖಲಿಸಲು ಆದೇಶ ನೀಡಬೇಕೆಂದು ಕೋರಿ ಅಡ್ವೊಕೇಟ್ ತುಲಿ ನ್ಯಾಯಾಲಯದ ಮೊರೆ ಹೋಗಿದ್ದರು.
ದೇಶದ ಸೈನಿಕರ ತ್ಯಾಗದ ಮೂಲಕ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ರಾಹುಲ್ ಗಾಂಧಿ ಹೇಳಿಕೆಯ ಅರ್ಥವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com