ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ವರದಿಗಳು ತಪ್ಪು: ಕಾಂಗ್ರೆಸ್ ಸ್ಪಷ್ಟನೆ

ಲೋಕಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು ಎಂಬ...

Published: 25th May 2019 12:00 PM  |   Last Updated: 25th May 2019 02:37 AM   |  A+A-


Reports of Rahul offering to quit as party chief incorrect, says Congress

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಗೆ ಮುಂದಾಗಿಲ್ಲ: ಮಾಧ್ಯಮಗಳ ವರದಿ ಬಳಿಕ ಕಾಂಗ್ರೆಸ್ ಸ್ಪಷ್ಟನೆ

Posted By : SBV SBV
Source : The New Indian Express
ನವದೆಹಲಿ: ಲೋಕಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿಯನ್ನು ಕಾಂಗ್ರೆಸ್ ಅಲ್ಲಗಳೆದಿದೆ. 

ಮೇ.25 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಪ್ರಸ್ತಾವನೆ ಮುಂದಿಟ್ಟಿದ್ದರು ಎಂಬ ಬಗ್ಗೆ ಎಎನ್ಐ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಈ ಬೆನ್ನಲ್ಲೇ ಕಾಂಗ್ರೆಸ್ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದ ಸುದ್ದಿ ನಿಜವಲ್ಲ ಎಂದು ಹೇಳಿದೆ.
 
ಸಿಡಬ್ಲ್ಯುಸಿ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸ್ ಗಢ, ಪಾಂಡಿಚರಿಯ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. 

ಲೋಕಸಭಾ ಚುನಾವಣೆಯ ಸೋಲಿನ ಕಾರಣಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp