ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಯತ್ನ ತೀವ್ರ: ಆರ್ ಎಸ್ಎಸ್

ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಪ್ರಯತ್ನಗಳನ್ನು ತೀವ್ರ ಗೊಳಿಸಲಾಗುವುದು ಎಂಬ ಇಂಗಿತವನ್ನು ರಾಷ್ಟ್ರೀಯ ಸ್ವಯಂ ಸೇವಕ....
ಮೋಹನ್ ಭಾಗವತ್
ಮೋಹನ್ ಭಾಗವತ್
ಜೈಪುರ್: ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಪ್ರಯತ್ನಗಳನ್ನು ತೀವ್ರ ಗೊಳಿಸಲಾಗುವುದು ಎಂಬ ಇಂಗಿತವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಭಾನುವಾರ ವ್ಯಕ್ತಪಡಿಸಿದ್ದಾರೆ.
ಉದಯಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಆಯೋಧ್ಯೆಯಲ್ಲಿ ಭಗವಾನ್ ರಾಮ ದೇಗುಲ ನಿರ್ಮಾಣ ಆಗಲೇಬೇಕಿದೆ ಎಂದು ಹೇಳಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ದಿಗ್ವಿಜಯ ಸಾಧಿಸಿದ ಮೂರುದಿನಗಳ ನಂತರ ಆರ್ ಎಸ್ ಎಸ್ ಮುಖ್ಯಸ್ಥರು ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿಯಾಗಿರುವ ಆರ್ ಎಸ್ ಎಸ್ ಆಯೋಧ್ಯೆಯ ವಿವಾಧಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಬೇಕೆಂದು ಮೊದಲಿನಿಂದಲೂ ಪದೇ ಪದೇ ಆಗ್ರಹಿಸುತ್ತಿದೆ.
ರಾಮ ಮಂದಿರ ನಿರ್ಮಾಣಕ್ಕೆ ಪೂರಕವಾಗಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿತ್ತು.
ಆದರೆ, ಆಯೋಧ್ಯೆಯ ಭೂಮಿ ಹಲವು ದಶಕಗಳಿಂದ ವಿವಾದಾಕ್ಕೀಡಾಗಿದ್ದು, ಭೂಮಿಯ ಮೇಲೆ ಹಿಂದೂ ಹಾಗೂ ಮುಸ್ಲಿಂ ಸಂಘಟನೆಗಳು ಹಕ್ಕು ಸಾಧಿಸುತ್ತಿವೆ.
ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ, ಆಯೋಧ್ಯೆಯಲ್ಲಿ ರಾಮ ದೇಗುಲವನ್ನು ಕಾಲಬದ್ಧವಾಗಿ ನಿರ್ಮಿಸಲು ಸಂವಿಧಾನದ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ರಾಮಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ಭೂಮಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಉಳಿದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com