ಕಾಶ್ಮೀರ: ಅನಂತ್ ನಾಗ್ ನಲ್ಲಿ ಇಬ್ಬರು ಉಗ್ರರ ಎನ್ಕೌಂಟರ್, ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಬಂಧನ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.

Published: 28th May 2019 12:00 PM  |   Last Updated: 28th May 2019 07:03 AM   |  A+A-


Two terrorists gunned down in Anantnag, Jammu and Kashmir

ಸಂಗ್ರಹ ಚಿತ್ರ

Posted By : SVN SVN
Source : PTI
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು  ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.

ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಅನಂತನಾಗ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಈ ಎನ್ಕೌಂಟರ್ ನಡೆದಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.  ಅನಂತ್ ನಾಗ್ ನ ಕಚ್ವಾನ್ ಅರಣ್ಯದಲ್ಲಿ  ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ, ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ)  ರಾಜ್ಯ ಪೊಲೀಸ್ ಮತ್ತು  ಸಿಆರ್ ಪಿಎಫ್ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.  ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು  ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದ್ದಾರೆ. 

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಗುಂಡಿನ ಚಕಮಕಿಯಾಗಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಇಬ್ಬರು ಉಗ್ರರ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಶರಣಾಗತಿ
ಇನ್ನು ಕಾಶ್ಮೀರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅನಂತನಾಗ್ ಜಿಲ್ಲೆ ಕೂಡ ಒಂದಾಗಿದ್ದು, ಮೇ ತಿಂಗಳಲ್ಲೇ ಭದ್ರತಾ ಪಡೆಗಳು 8 ಮಂದಿ ಉಗ್ರರನ್ನು ಹತ್ಯೆಗೈದಿವೆ. ಅಂತೆಯೇ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಜೀವಂತ ಸೆರೆ ಹಿಡಿಯಲಾಗಿದೆ. ಇತ್ತೀಚೆಗಷ್ಟೇ ತ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಝಾಕಿರ್ ಮುಸಾನನ್ನು ಕೊಲ್ಲಲಾಗಿತ್ತು. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp