ಆರೋಗ್ಯ ಸಚಿವ ಜೆಪಿ ನಡ್ಡಾಗೆ ಬಿಜೆಪಿ ಅಧ್ಯಕ್ಷ ಸ್ಥಾನ?

ಬಿಜೆಪಿ ಚಾಣಕ್ಯ ಅಮಿತ್ ಶಾ ಕೇಂದ್ರ ಸಂಪುಟ ಸೇರುವ ತಯಾರಿ ನಡೆಸಿರುವ ಬೆನಲ್ಲೇ ಪಕ್ಷದ ಅಧ್ಯಕ್ಷ ಹುದ್ದೆ ಯಾರ ಪಾಲಾಗಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು.
ಜೆಪಿ ನಡ್ಡಾ
ಜೆಪಿ ನಡ್ಡಾ
ನವದೆಹಲಿ: ಬಿಜೆಪಿ ಚಾಣಕ್ಯ ಅಮಿತ್ ಶಾ ಕೇಂದ್ರ ಸಂಪುಟ ಸೇರುವ ತಯಾರಿ ನಡೆಸಿರುವ ಬೆನಲ್ಲೇ ಪಕ್ಷದ ಅಧ್ಯಕ್ಷ ಹುದ್ದೆ ಯಾರ ಪಾಲಾಗಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಆದರೆ ಈಗ ಬಂದ ಮಾಹಿತಿಯಂತೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಬಿಜೆಪಿಯ ಹೊಸ ರಾಷ್ಟ್ರಾಧ್ಯಕ್ಷರಾಗಿ ನೇಮಕವಾಗಲಿದ್ದಾರೆ.
ನಡ್ಡಾ ಅವರು ಶಾ ಜತೆ ಆತ್ಮೀಯ ಒಡನಾಟ ಹೊಂದಿದ್ದು ಅವರೇ ಪಕ್ಷದ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಬಿಜೆಪಿ ಆಂತರಿಕ ಮೂಲಗಳಿಂದ ಮಾತುಗಳು ಕೇಳಿಬರುತ್ತಿದೆ.
ಇನ್ನು ಮುಂದಿನ ಜುಲೈ 10ರಂದು ಕೇಂದ್ರ ಬಜೆಟ್ ಮಂಡನೆಯಾಗುವ ಲಕ್ಷಣವಿದೆ. ಇದಾದ ನಂತರ ಸಪ್ಟೆಂಬರ್ ನಲ್ಲಿ ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.ಅಲ್ಲ್ದೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಸಹ ಇದೇ ವರ್ಷ ಚುನಾವಣೆ ಇದೆ. ಈ ಎಲ್ಲಾ ಚುನಾವಣೆ ವೇಳೆ ನಡ್ದಾ ಪಕ್ಷದ ಮುಂದಾಳತ್ವ ವಹಿಸಿಕೊಂಡು ಕಾರ್ಯತಂತ್ರ ರೂಪಿಸಲಿದ್ದಾರೆ ಎನ್ನಲಾಗುತ್ತಿದೆ.
ಇದೆಲ್ಲದರ ನಡುವೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದು ಅವರ ಅಂಗಪಕ್ಷಗಳ ನಾಯಕರಲ್ಲೇ ಮುಸುಕಿನ ಗುದ್ದಾಟ ಮುಂದುವರಿದಿದೆ. ಒಂದೊಮ್ಮೆ ಇದೇ ರೀತಿ ಮುಂದುವರಿದು ಸರ್ಕಾರ ಪತನವಾದಲ್ಲಿ ರಾಜ್ಯದಲ್ಲಿ ಸಹ ವಿಧಾನಸಭೆ ಚುನಾವಣೆ ಎದುರಾಗಲಿದೆ. ಮುಂದಿನ ವರ್ಷಾರಂಭಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ ವಿಧಾನಸಭೆ ಚುನಾವಣೆ ನಡೆಯಲಿದೆ.
59 ವರ್ಷದ ನಡ್ಡಾ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾರೆ. ಇವರು ರಾಜ್ಯಸಭೆ ಸದಸ್ಯರಾಗಿದ್ದು ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿಯಾಗಿದ್ದಾರೆ. ನಡ್ಡಾ ಅವರನ್ನು ಪಕ್ಷದ ಪ್ರಮುಖ ತಂತ್ರಜ್ಞ ಎಂದೂ ಕರೆಯಲಾಗುತ್ತದೆ.
ಇತ್ತೀಚಿನ ಲೋಕಸಭೆ ಚುನಾವಣೆಯ ವೇಳೆ ನಡ್ಡಾ ಅವರಿಗೆ ಉತ್ತರ ಪ್ರದೇಶದ ಉಸ್ತುವಾರಿ ವಹಿಸಲಾಗಿತ್ತು. ಅಲ್ಲಿ ಪಕ್ಷವು 80 ಸ್ಥಾನಗಳ ಪೈಕಿ 62 ಸ್ಥಾನ ಗಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com