ಅಕ್ಟೋಬರ್ ನಲ್ಲಿ ಪ್ರಧಾನಿ ಮೋದಿ, ಕ್ಸಿ ಜಿನ್ ಪಿಂಗ್ ಔಪಚಾರಿಕ ಸಭೆ!

ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ಅಕ್ಟೋಬರ್ ನಲ್ಲಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಔಪಚಾರಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ಅಕ್ಟೋಬರ್ ನಲ್ಲಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಔಪಚಾರಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ವಿದೇಶಾಂಗ ಇಲಾಖೆ ವಕ್ತಾರರು ಮಾಹಿತಿ ನೀಡಿದ್ದು, ವುಹಾನ್ ಶೃಂಗಸಭೆ ಬಳಿಕ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಪರಸ್ಪರ ಭೇಟಿಯಾಗುತ್ತಿದ್ದು, ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿದೇಶಾಂಗ ಇಲಾಖೆ ವುಹಾನ್ ಶೃಂಗಸಭೆ ನಡೆದಾಗಲೇ ಮತ್ತೊಂದು ಭೇಟಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಒಪ್ಪಿಗೆ ನೀಡಿದ್ದರು. ಅಂದು ಕ್ಸಿ ಜಿನ್ ಪಿಂಗ್ ಅವರು ಭಾರತಕ್ಕೆ ಭೇಟಿ ನೀಡುವ ಕುರಿತು ಭರವಸೆ ನೀಡಿದ್ದರು. ಹೀಗಾಗಿ ಅಕ್ಟೋಬರ್ ನಲ್ಲಿ ಶೃಂಗಸಭೆ ಆಯೋಜನೆಯಾಗುವ ಸಾಧ್ಯತೆ ಎಂದು ಹೇಳಿದೆ.
ಅಂತೆಯೇ ಶೃಂಗಸಭೆಯ ಸ್ಥಳ ಮತ್ತು ಸಮಯದ ಕುರಿತು ಇಲಾಖೆ ಮಾಹಿತಿ ನೀಡಿಲ್ಲ. ಈ ಕುರಿತ ವೇಳಾಪಟ್ಟಿ ಸಿದ್ಧಪಡಿಸಲು ಉಭಯ ದೇಶಗಳ ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com