ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಇಂದು ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ

ಆಂಧ್ರ ಪ್ರದೇಶ ರಾಜ್ಯದ ಚುಕ್ಕಾಣಿ ಹಿಡಿಯಲು 46 ವರ್ಷದ ಯೆದುಗಿರಿ ಸಂಡಿಂಟಿ ಜಗನ್ ಮೋಹನ್ ...
ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ
ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ
ವಿಜಯವಾಡ: ಆಂಧ್ರ ಪ್ರದೇಶ ರಾಜ್ಯದ ಚುಕ್ಕಾಣಿ ಹಿಡಿಯಲು 46 ವರ್ಷದ ಯೆದುಗಿರಿ ಸಂಡಿಂಟಿ ಜಗನ್ ಮೋಹನ್ ರೆಡ್ಡಿ ಸಜ್ಜಾಗಿದ್ದಾರೆ.
ಇಂದು ಮಧ್ಯಾಹ್ನ 12.23 ಗಂಟೆಗೆ ಪುನರ್ವಿಭಜನೆಯ ಆಂಧ್ರ ಪ್ರದೇಶದ ಎರಡನೇ ಮುಖ್ಯಮಂತ್ರಿಯಾಗಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜಗನ್ ಅಣ್ಣಾ ಎಂದೇ ಆಂಧ್ರ ಪ್ರದೇಶದಲ್ಲಿ ಜನಪ್ರಿಯರಾಗಿರುವ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಗೌಪ್ಯತೆ ಮತ್ತು ಅಧಿಕಾರದ ಪ್ರಮಾಣವಚನ ಬೋಧಿಸಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಮತ್ತು ವಿವಿಐಪಿಗಳು ಹೈದರಾಬಾದ್ ನ ಇಂದಿರಾ ಗಾಂಧಿ ಮುನ್ಸಿಪಲ್ ಕಾರ್ಪೊರೇಶನ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಸುಮಾರು 3 ಸಾವಿರ ಜನ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಕೃಷ್ಣ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಖುದ್ದು ಜಗನ್ ಮೋಹನ್ ರೆಡ್ಡಿಯವರೇ ಆಹ್ವಾನ ನೀಡಿದ್ದರೂ ಚಂದ್ರಬಾಬು ನಾಯ್ಡು ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ. ಬಿಜೆಪಿ, ಸಿಪಿಐ, ಸಿಪಿಎಂ ಮತ್ತು ಜನ ಸೇನಾ ನಾಯಕರುಗಳಿಗೆ ಆಹ್ವಾನ ಹೋಗಿದೆ.
ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಕಣ್ತುಂಬಿಕೊಳ್ಳಲು ನಗರದಾದ್ಯಂತ 14 ಬೃಹತ್ ಎಲ್ಇಡಿ ಪರದೆಗಳನ್ನು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಮಾರು 5 ಸಾವಿರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಆಹ್ವಾನಿತರಿಗೆ ಅನುಕೂಲವಾಗಲು 18 ಗ್ಯಾಲರಿಗಳನ್ನು ವಿಭಾಗಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com