ದೆಹಲಿ 'ಧಗಧಗ'; 46.8ಕ್ಕೇರಿದ ಉಷ್ಣಾಂಶ, ಬೇಸಿಗೆ ತಾಪಕ್ಕೆ ರಾಜಧಾನಿ ಕಂಗಾಲು

ಬಿಸಿಲ ತಾಪಕ್ಕೆ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ನಿನ್ನೆ ದಾಖಲೆಯ ಗರಿಷ್ಠ ತಾಪಮಾನ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಿಸಿಲ ತಾಪಕ್ಕೆ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ನಿನ್ನೆ ದಾಖಲೆಯ ಗರಿಷ್ಠ ತಾಪಮಾನ ದಾಖಲಾಗಿದೆ.
ದೆಹಲಿಯಲ್ಲಿ ನಿನ್ನೆ 46.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ಐದು ವರ್ಷಗಳಲ್ಲೇ ಗರಿಷ್ಠ ತಾಪಮಾನ ಇದಾಗಿದೆ. 2013ರ ಮೇ ತಿಂಗಳಲ್ಲಿ 47.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದಾದ ಬಳಿಕ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ತಾಪಮಾನ ದಾಖಲಾಗಿದೆ.
ಈ ಬಗ್ಗೆ ಖ್ಯಾತ ಹವಾಮಾನ ಸಂಸ್ಥೆ ಸ್ಕೈಮೇಟ್ ಟ್ವೀಟ್ ಮಾಡಿದ್ದು. ದೆಹಲಿಯ ಪಾಲಮ್ ಪ್ರದೇಶದಲ್ಲಿ 46.8 ಡಿಗ್ರಿ ಉಷ್ಣಾಂಶ ದಾಖಲಾಗಿದೆ. 1998ರ ಮೇ ತಿಂಗಳಲ್ಲಿ 48.4 ಡಿಗ್ರಿ ತಾಪಮಾನ ದಾಖಲಾಗಿದ್ದು ಈ ವರೆಗಿನ ಗರಿಷ್ಠ ತಾಪಮಾನವಾಗಿದೆ. 
'ದೆಹಲಿಯ ಇತರೆ ಭಾಗಗಳಿಗಿಂತಲೂ ದೆಹಲಿಯ ಪಾಲಮ್ ನಲ್ಲಿ ಸಾಮಾನ್ಯವಾಗಿ ಹೆಚ್ಚಿನ ತಾಪಮಾನವಿರುತ್ತದೆ. ಅಲ್ಲದೆ ಇದು ವಿಮಾನ ನಿಲ್ದಾಣವಿರುವ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಮಾನಗಳ ಸಂಚಾರವಿರುತ್ತದೆ. ಹೀಗಾಗಿ ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಮಾನದ ಹೊಗೆ ವಾತಾವರಣ ಸೇರಿ ತಾಪಮಾನ ಹೆಚ್ಚಾಗುವಿಕೆಗೆ ಕಾರಣವಾಗುತ್ತದೆ ಎಂದು ಹವಾಮಾನ ಸಂಸ್ಥೆಯ ಮಹೇಶ್ ಪಾಲಾವಟ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com