17ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 17ರಿಂದ ಆರಂಭ, ಜುಲೈ 5ಕ್ಕೆ ಬಜೆಟ್

17ನೇ ಲೋಕಸಭೆ ಮೊದಲ ಅಧಿವೇಶನ ಜೂನ್ 17 ರಿಂದ ಆರಂಭವಾಗಿ ಜುಲೈ 26 ರವರೆಗೆ ನಡೆಯಲಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರದ ಅಧಿಕಾರಿಗಳು...

Published: 31st May 2019 12:00 PM  |   Last Updated: 31st May 2019 08:50 AM   |  A+A-


First session of Parliament to begin from June 17; Union Budget to be presented on July 5

ಸಂಸತ್ ಭವನ

Posted By : LSB LSB
Source : PTI
ನವದೆಹಲಿ: 17ನೇ ಲೋಕಸಭೆ ಮೊದಲ ಅಧಿವೇಶನ ಜೂನ್ 17 ರಿಂದ ಆರಂಭವಾಗಿ ಜುಲೈ 26 ರವರೆಗೆ ನಡೆಯಲಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. 

ನಿನ್ನೆಯಷ್ಟೇ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ ಮೊದಲ ಸಂಪುಟ ಸಭೆಯಲ್ಲಿ ಸಂಸತ್ ಅಧಿವೇಶನದ ದಿನಾಂಕ ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜೂನ್ 20ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, ಜುಲೈ 5ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.

ಇನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಮನೇಕಾ ಗಾಂಧಿ ಅವರು ಜೂನ್ 17ರಂದು ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಬಳಿಕ ಪೂರ್ಣಾವಧಿ ಸ್ಪೀಕರ್ ನೇಮಕಕ್ಕಾಗಿ ಜೂನ್ 19 ರಂದು ಸ್ಪೀಕರ್ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಸತತವಾಗಿ ಐದು ವರ್ಷಗಳ ಕಾಲಾವಧಿಯನ್ನು ಪೂರೈಸಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಮೊದಲ ಕಾಂಗ್ರೆಸೇತರ ಪ್ರಧಾನಿ ಎನ್ನುವ ಖ್ಯಾತಿಯನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಪರವಾಗಿ ಇದುವರೆಗೆ  ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಮಾತ್ರ ಈ ಸಾಧನೆ ಮಾಡಿದ್ದಾರೆ.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp