ಕಾಶ್ಮೀರ: ವಿಧ್ವಂಸಕ್ಕೆ ಉಗ್ರರ ಸಂಚು, ಸೇನೆಯ ಗುಂಡಿಗೆ ಉಗ್ರ ಹತ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಉಗ್ರರ ಮೇಲೆ ಸೇನೆ ಮುಗಿ ಬಿದ್ದಿದ್ದು, ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ.

Published: 31st May 2019 12:00 PM  |   Last Updated: 31st May 2019 08:49 AM   |  A+A-


Shopian encounter: one Terrorist Killed, Operation is underway

ಸಂಗ್ರಹ ಚಿತ್ರ

Posted By : SVN SVN
Source : ANI
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಉಗ್ರರ ಮೇಲೆ ಸೇನೆ ಮುಗಿ ಬಿದ್ದಿದ್ದು, ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ.

ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡ್ರ್ಯಾಗಡ್ ಸುಗಾನ್ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಇಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನೆ ಕೂಡಲೇ ಆ ಮನೆಯನ್ನು ಸುತ್ತುವರೆದು ಉಗ್ರರಿಗೆ ಶರಣಾಗುವಂತೆ ಎಚ್ಚರಿಕೆ ನೀಡಿತು. ಆದರೆ ಸೇನೆ ಮನೆಯನ್ನು ಸುತ್ತುವರಿಯುತ್ತಲೇ ಏಕಾಏಕಿ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆ ಗೈದಿದ್ದಾರೆ. 

ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ನಡೆಸಿದ್ದು, ಸೈನಿಕರ ಗುಂಡಿಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನಾ ಪ್ರದೇಶದಲ್ಲಿ ಇನ್ನೂ ಉಗ್ರರಿರುವ ಶಂಕೆ ವ್ಯಕ್ತವಾಗಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp