ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್  ಭಾರತಕ್ಕೆ ಆಗಮನ: ಇಂದು ರಾಷ್ಟ್ರಪತಿ, ಪ್ರಧಾನಿ ಭೇಟಿ, ಮಾತುಕತೆ  

ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. 
ಏಂಜೆಲಾ ಮರ್ಕೆಲ್
ಏಂಜೆಲಾ ಮರ್ಕೆಲ್

ನವದೆಹಲಿ: ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಜರ್ಮನ್ ಪ್ರಧಾನಿ ಏಂಜೆಲಾ ಮರ್ಕೆಲ್ ಅವರಿಗೆ ಶುಕ್ರವಾರ ರಾಷ್ಟ್ರಪತಿ ಭವನದ ಅಂಗಳದಲ್ಲಿ ಭವ್ಯ ಮತ್ತು ಅದ್ದೂರಿ ಸ್ವಾಗತ ನೀಡಲಾಯಿತು.

ಉನ್ನತ ಮಟ್ಟದ ನಿಯೋಗದೊಂದಿಗೆ ಆಗಮಿಸಿರುವ ಅವರು, ಭೇಟಿಯ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದು ಕೃಷಿ, ವಿಜ್ಞಾನ ತಂತ್ರಜ್ಞಾನ ಸೇರಿದಂತೆ ಒಟ್ಟು 20 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.


ನಿನ್ನೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮರ್ಕೆಲ್ ಅವರನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಸಚಿವ ಜಿತೇಂದ್ರ ಸಿಂಗ್ ಬರಮಾಡಿಕೊಂಡರು. 


ಇಂದು ಅವರು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದ ನಂತರ ಭಾರತದ ಬೇರೆ ನಾಯಕರು ಮತ್ತು ಉದ್ಯಮ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.


ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ನಂತರ ರಾಜಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಗೌರವ ನಮನ ಸಲ್ಲಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com