ಜಾರ್ಖಂಡ್ ವಿಧಾನಸಭೆ ಚುನಾವಣೆ: ನ.30ರಿಂದ 5 ಹಂತದಲ್ಲಿ ಮತದಾನ, ಡಿ.23ರಂದು ಫಲಿತಾಂಶ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿ
ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿ

ರಾಂಚಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಜಾರ್ಖಂಡ್ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ನಿಗದಿ ಮಾಡಿದೆ. ಈ ಕುರಿತು ಇಂದು ದೆಹಲಿಯ ಚುನಾವಣಾ ಆಯೋಗದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನಿಲ್ ಅರೋರಾ ಅವರು, ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ಐದು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ. ನವೆಂಬರ್ 30 ರಿಂದ ಡಿಸೆಂಬರ್ 20ರವರೆಗೂ ಈ ಐದು ಹಂತಗಳ ಮತದಾನ ನಡೆಯಲಿದೆ. ಡಿಸೆಂಬರ್ 23ರಂದು ಮತಣಿಕೆ ಕಾರ್ಯ ಮತ್ತು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.

ಜಾರ್ಖಂಡ್‌ನ 19 ಜಿಲ್ಲೆಗಳು ನಕ್ಸಲ ಪೀಡಿತ ಪ್ರದೇಶಗಳಾಗಿರುವುದರಿಂದ 5 ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ನವೆಂಬರ್ 30 ರಂದು ಮೊದಲ ಹಂತಕ್ಕೆ ಮತ ಚಲಾಯಿಸಲಾಗುವುದು. ಮೊದಲ ಹಂತದಲ್ಲಿ 13 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ 7 ರಂದು ಎರಡನೇ ಹಂತ, ಡಿಸೆಂಬರ್ 12 ರಂದು ಮೂರನೇ ಹಂತ, ಡಿಸೆಂಬರ್ 16 ರಂದು ನಾಲ್ಕನೇ ಹಂತ ಮತ್ತು ಡಿಸೆಂಬರ್ 20 ರಂದು ಐದನೇ ಹಂತದ ಮತದಾನ ನಡೆಯಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com