ತ್ರಿಪುರ: ಲಾರಿಯಲ್ಲೇ ಸೆಕ್ಸ್ ಮಾಡಿ ಹಣ ಕೊಡದ ಚಾಲಕನ ಮರ್ಮಾಂಗ ಕತ್ತರಿಸಿದ ಮಹಿಳೆ!

ರಸ್ತೆ ಬದಿ ಲಾರಿ ನಿಲ್ಲಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಹಣ ಕೊಡದೆ ಪರಾರಿಯಾಗಲು ಯತ್ನಿಸುತ್ತಿದ್ದ ಚಾಲಾಕಿ ಲಾರಿ ಚಾಲಕನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಕೇರಳದಲ್ಲಿ ನಡೆದಿದೆ.

Published: 01st November 2019 07:55 PM  |   Last Updated: 03rd November 2019 10:53 AM   |  A+A-


crime

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಧರ್ಮಾನಗರ್ : ರಸ್ತೆ ಬದಿ ಲಾರಿ ನಿಲ್ಲಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಹಣ ಕೊಡದೆ ಪರಾರಿಯಾಗಲು ಯತ್ನಿಸುತ್ತಿದ್ದ ಚಾಲಾಕಿ ಲಾರಿ ಚಾಲಕನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ತ್ರಿಪುರದಲ್ಲಿ ನಡೆದಿದೆ.

ಅಗರ್ತಾಲ್ ನಿಂದ 171ಕಿಮೀ ದೂರದಲ್ಲಿರುವ ಧರ್ಮಾನಗರ್ ಪಟ್ಟಣದ ರಾಜ್ ಬರಿ ಪ್ರದೇಶದಲ್ಲಿ ಅಕ್ಟೋಬರ್ 24ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಹಿಳೆಯನ್ನು ಪುಸಲಾಯಿಸಿ ಲಾರಿಗೆ ಹತ್ತಿಸಿಕೊಂಡ ಚಾಲಕ ರಸ್ತೆ ಪಕ್ಕದಲ್ಲಿಯೇ ಲಾರಿ ಪಾರ್ಕ್ ಮಾಡಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾನೆ. ನಂತರ ಹಣ ಕೊಡದೆ ಸತಾಯಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ಮರ್ಮಾಂಗವನ್ನೇ ಕತ್ತರಿಸಿ ಎಸೆದಿದ್ದಾಳೆ.

ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಲಾರಿ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಈ,ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp