ಕಾಂಗ್ರೆಸ್ ಒತ್ತಡಕ್ಕೆ ಮಣಿದು ಆರ್‌ಸಿಇಪಿಯಿಂದ ಹಿಂದೆ ಸರಿದ ಪ್ರಧಾನಿ ಮೋದಿ; ಸುರ್ಜೇವಾಲ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.
ರಣದೀಪ್ ಸಿಂಗ್ ಸುರ್ಜೆವಾಲ
ರಣದೀಪ್ ಸಿಂಗ್ ಸುರ್ಜೆವಾಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಐಸಿಸಿ ಸಂಪರ್ಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ‘ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ  ತೀವ್ರ ಒತ್ತಡದಿಂದ ಬಿಜೆಪಿ ಸರ್ಕಾರ ರೈತರು, ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರಿಗೆ ಅನಾನುಕೂಲವಾಗುವಂತಹ ಒಪ್ಪಂದದಿಂದ ಹಿಂದೆ ಸರಿಯುವಂತಾಯಿತು’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಒಪ್ಪಂದದಿಂದ ಭಾರತೀಯರ ಜೀವನ ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಹಾನಿಯಾಗುತ್ತದೆ. ಆದ್ದರಿಂದ ಮೋದಿ ಅವರು, ಮಹಾತ್ಮಾ ಗಾಂಧಿ ಅವರ ದುರ್ಬಲ ವರ್ಗದವರಿಗೆ ನೆರವಾಗುವ ಹೇಳಿಕೆಗಳನ್ನು ಸ್ಮರಿಸಿ, ಒಪ್ಪಂದದಿಂದ ಹಿಂದೆ ಸರಿದಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com