ವಾಯು ಮಾಲಿನ್ಯ ತಡೆಗೆ ಬಿಹಾರ ಸರ್ಕಾರದ ಕ್ರಮ; 15 ವರ್ಷ ಹಳೆಯ ವಾಹನಗಳ ನಿಷೇಧ!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅಪಾಯದ ಮಟ್ಟ ಮೀರಿರುವಂತೆಯೇ ಇತ್ತ ಬಿಹಾರ ಸರ್ಕಾರ ವಾಯುಮಾಲಿನ್ಯ ತಡೆಗೆ ಮಹತ್ವದ ಕ್ರಮವನ್ನು ಕೈಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಾಟ್ನಾ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅಪಾಯದ ಮಟ್ಟ ಮೀರಿರುವಂತೆಯೇ ಇತ್ತ ಬಿಹಾರ ಸರ್ಕಾರ ವಾಯುಮಾಲಿನ್ಯ ತಡೆಗೆ ಮಹತ್ವದ ಕ್ರಮವನ್ನು ಕೈಗೊಂಡಿದೆ.

ಅದರಂತೆ ಇಂದಿನಿಂದಲೇ ಅನ್ವಯವಾಗುವಂತೆ ಇನ್ನು ಮುಂದೆ ಬಿಹಾರದಲ್ಲಿ 15 ವರ್ಷಗಳಿಗಿಂತ ಹಳೆಯದಾದ ಕಾರು ಮತ್ತು ವಾಣಿಜ್ಯ ವಾಹನಗಳನ್ನು ನಿಷೇಧಿಸಲಾಗಿದೆ. ಇದು ಕೇವಲ ಖಾಸಗಿ ವಾಹನಗಳಿಗೆ ಮಾತ್ರ ಸೀಮಿತವಾಗಿರದೇ ಸರ್ಕಾರಿ ವಾಹನಗಳಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಪಾಟ್ನಾ ಮತ್ತು ಬಿಹಾರದ ಇತರ ನಗರಗಳಲ್ಲಿನ ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 15 ವರ್ಷ ಹಳೆಯ ಸರ್ಕಾರಿ ಮತ್ತು ವಾಣಿಜ್ಯ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿದೆ. ಬಿಹಾರದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ತಿಳಿಸಿದ್ದಾರೆ. 

ಈ ನಿಯಮ ನವೆಂಬರ್ 5(ಮಂಗಳವಾರ)ದಿಂದ ಜಾರಿಗೆ ಬಂದಿದ್ದು. ಬಿಹಾದಾದ್ಯಂತ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ, ವಾಣಿಜ್ಯ ವಾಹನಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com