ಪಂಚಕುಲ ಹಿಂಸಾಚಾರ: ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಗೆ ಜಾಮೀನು

2017ರಲ್ಲಿ ಪಂಚಕುಲದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಗೆ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಹನಿಪ್ರೀತ್
ಹನಿಪ್ರೀತ್

ಪಂಚಕುಲ: 2017ರಲ್ಲಿ ಪಂಚಕುಲದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಗೆ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಹನಿಪ್ರೀತ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಂಚಕುಲ ಕೋರ್ಟ್, ಒಂದು ಲಕ್ಷ ರೂಪಾಯಿ ಬಾಂಡ್ ಶೂರಿಟಿ ಮೇಲೆ ಆರೋಪಿಗೆ ಜಾಮೀನು ನೀಡಲಾಗಿದ್ದು, ಇಂದು ಸಂಜೆ ಅಂಬಲ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಆರೋಪಿ ಪರ ವಕೀಲ ಆರ್ ಎಸ್ ಚೌಹ್ವಾನ್ ಅವರು ತಿಳಿಸಿದ್ದಾರೆ.

ಕಳೆದ ಶನಿವಾರವಷ್ಟೇ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಹನಿಪ್ರೀತ್ ವಿರುದ್ಧದ ದೇಶ ದ್ರೋಹ ಪ್ರಕರಣ ಕೈಬಿಟ್ಟಿತ್ತು. ನಂತರ ಹನಿಪ್ರೀತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

 ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ಪಂಚಕುಲದಲ್ಲಿ ನಡೆದ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಹನಿಪ್ರೀತ್ ಅವರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com