ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ಗರಂ

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವಾಪಸ್ಸು ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್, ಲ್ಯಾಂಡ್ ಲೈನ್, ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವಾಪಸ್ಸು ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್, ಲ್ಯಾಂಡ್ ಲೈನ್, ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದ ಅಧಿಸೂಚನೆ ಮತ್ತು ಆದೇಶಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಕ್ರಮ ಎಂದು ಸುಪ್ರೀಂಕೋರ್ಟ್ ಅಸಮಾಧಾನ ಹೊರಹಾಕಿದೆ.

ಜಮ್ಮು–ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದುಕೊಂಡ 90 ದಿನಗಳ ನಂತರ ಪೂರ್ವಪಾವತಿ (ಪ್ರೀಪೇಯ್ಡ್) ಮೊಬೈಲ್ ಸೇವೆಗಳು ಆರಂಭವಾಗದೇ ಇರುವ ಕಾರಣ, ಮಾಧ್ಯಮಗಳ ಕೆಲಸಕ್ಕೆ ಭಾರಿ ತೊಂದರೆಯಾಗಿದೆ ಎಂದು ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಅಸಮಾಧಾನ ಹೊರಹಾಕಿದೆ. ಕಾಶ್ಮೀರ ಟೈಮ್ಸ್ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅನೂರಾಧ ಭಾಸಿನ್ ಅವರು ಕಣಿವೆ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಪ್ರಶ್ನೆ ಮಾಡಿ ನ್ಯಾಯಾಲಯದ ಮೊರೆ ಹೋಗಿದ್ದರು. 

ಅಲ್ಲದೇ ಇದು ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯೂ ಆಗಲಿದೆ ಎಂದು ನ್ಯಾಯಾಲಯದ ಗಮನ ಸೆಳೆದಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸುವ ಅಧಿಸೂಚನೆ ಮತ್ತು ಆದೇಶಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಕ್ರಮ ಎಂದು ರಾಜ್ಯ ಸರ್ಕಾರದ ನಡೆಗೆ ಅತೃಪ್ತಿ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com