ಉದ್ಧವ್ ಠಾಕ್ರೆ ಮತ್ತು ಮೋಹನ್ ಭಾಗವತ್ ಮಧ್ಯೆ ಯಾವುದೇ ಮಾತುಕತೆಯಾಗಿಲ್ಲ: ಸಂಜಯ್ ರಾವತ್ 

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಧ್ಯೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಸಂಜಯ್ ರಾವತ್
ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಧ್ಯೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.


ಇಂದು ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯ ಶಾಸಕರು ಮತ್ತು ಕಾಂಗ್ರೆಸ್ ಹಾಗೂ ಎನ್ ಸಿಪಿಗಳ ನಾಯಕರು ತಮ್ಮ ವ್ಯಾಪ್ತಿ ಮೀರಿ ಹೋಗುವುದಿಲ್ಲ. ಭಾಗವತ್ ಮತ್ತು ಠಾಕ್ರೆ ನಡುವೆ ಯಾವುದೇ ಮಾತುಕತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.


ನಿರ್ಗಮಿತ ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇದೇ 9ಕ್ಕೆ ಮುಕ್ತಾಯವಾಗಲಿದ್ದು, ಅದರೊಳಗೆ ನೂತನ ಸರ್ಕಾರ ಜಾರಿಗೆ ಬರಬೇಕು. ಖಾತೆಗಳ ಸಮಾನ ಹಂಚಿಕೆ ಮತ್ತು ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಷಯದಲ್ಲಿ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಕಳೆದ ತಿಂಗಳು 24ರಿಂದ ಹಗ್ಗ-ಜಗ್ಗಾಟ ನಡೆದು ಸರ್ಕಾರ ರಚನೆ ಮುಂದಕ್ಕೆ ಹೋಗುತ್ತಿದೆ.

ನಿತಿನ್ ಗಡ್ಕರಿ-ಭಾಗವತ್ ಭೇಟಿ: ಈ ಮಧ್ಯೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ಹಿರಿಯ ರಾಜಕಾರಣಿ, ಮಾಜಿ ರಾಜ್ಯ ಸಚಿವ, ಮಾಜಿ ಬಿಜೆಪಿ ಅಧ್ಯಕ್ಷರಾಗಿರುವ ನಿತಿನ್ ಗಡ್ಕರಿ ಅವರನ್ನು ಬಿಕ್ಕಟ್ಟಿನ ಪೆಹಲ್ವಾನ ಎಂದು ಕರೆಯಲಾಗುತ್ತದೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಆರ್ ಎಸ್ಎಸ್ ಮತ್ತು ಇತರ ರಾಜಕೀಯ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಇರಿಸಿಕೊಂಡಿದ್ದಾರೆ.


ಗಡ್ಕರಿಯವರು ಉದ್ಧವ್ ಠಾಕ್ರೆ ಜೊತೆ ಕೂಡ ಉತ್ತಮ ಸಂಪರ್ಕ ಇರಿಸಿಕೊಂಡಿದ್ದಾರೆ. ಇಷ್ಟು ದಿನಗಳ ಭಿನ್ನಾಭಿಪ್ರಾಯಗಳನ್ನು ಅವರು ಎರಡೇ ಗಂಟೆಗಳಲ್ಲಿ ಶಮನಗೊಳಿಸಿ ಸರ್ಕಾರ ರಚನೆಯ ಪ್ರಕ್ರಿಯೆಯನ್ನು ಸರಳ ಮಾಡಿಕೊಡುತ್ತಾರೆ ಎಂಬ ನಂಬಿಕೆ ರಾಜಕೀಯ ವಲಯದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com