ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ! 

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಇನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತೀಯ ಭಾಷೆಗಳಲ್ಲೂ ಪ್ರಕಟಣೆಗಳು ಲಭ್ಯವಾಗಲಿವೆ. 

Published: 07th November 2019 05:32 PM  |   Last Updated: 07th November 2019 05:32 PM   |  A+A-

Varanasi station to have announcements in South Indian languages

ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ!

Posted By : Srinivas Rao BV
Source : The New Indian Express

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಇನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತೀಯ ಭಾಷೆಗಳಲ್ಲೂ ಪ್ರಕಟಣೆಗಳು ಲಭ್ಯವಾಗಲಿವೆ. 

ತಮಿಳು, ತೆಲುಗು, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಇನ್ನು ಮುಂದೆ ವಾರಾಣಸಿ ರೈಲು ನಿಲ್ದಾಣದಲ್ಲಿ ಪ್ರಕಟಣೆಗಳನ್ನು ಕೇಳಬಹುದಾಗಿದೆ.

ಪವಿತ್ರ ಕ್ಷೇತ್ರವಾಗಿರುವ ವಾರಾಣಸಿಗೆ ಹಿಂದಿಯೇತರ ಭಾಷೆಗಳನ್ನು ಮಾತನಾಡುವ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ, ಅವರಿಗೆಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ್ ಮೋಹನ್ ಹೇಳಿದ್ದಾರೆ. 

ಪ್ರಾರಂಭಿಕ ಹಂತದಲ್ಲಿ ತಮಿಳು, ಮಲಯಾಳಂ, ಕನ್ನಡ, ತೆಲುಗು ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಲಾಗುತ್ತದೆ. ತಿಂಗಳಾಂತ್ಯಕ್ಕೆ ಒಡಿಯಾ, ಮರಾಠಿ ಭಾಷೆಗಳಲ್ಲಿಯೂ ಪ್ರಕಟಣೆ ಲಭ್ಯವಾಗಲಿದೆ ಎಂದು ಆನಂದ್ ಮೋಹನ್ ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp