ಉ.ಪ್ರ: ಅಯೋಧ್ಯೆ ತೀರ್ಪು ಹಿನ್ನೆಲೆ, ಮುಖ್ಯ ಕಾರ್ಯದರ್ಶಿ, ಡಿಜಿಪಿಯೊಂದಿಗೆ ಸಿಜೆಐ ಮಾತುಕತೆ

ಮುಂದಿನ ವಾರ ಅಯೋಧ್ಯೆ ವಿವಾದಿತ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ಮಾತುಕತೆ ನಡೆಸುವ ಸಾಧ್ಯತೆ ಇದೆ. 
ಭದ್ರತೆಯ ಚಿತ್ರಗಳು
ಭದ್ರತೆಯ ಚಿತ್ರಗಳು

ಲಖನೌ: ಮುಂದಿನ ವಾರ ಅಯೋಧ್ಯೆ ವಿವಾದಿತ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ಮಾತುಕತೆ ನಡೆಸುವ ಸಾಧ್ಯತೆ ಇದೆ. 

ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ತಿವಾರಿ ಮತ್ತು ಡಿಜಿಪಿ ಓಂ ಪ್ರಕಾಶ್ ಸಿಂಗ್ ಅವರನ್ನು ಮಾತುಕತೆಗಾಗಿ ತಮ್ಮ ಚೆಂಬರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರು ಕರೆದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ 40 ದಿನಗಳ ಕಾಲ ಪ್ರತಿದಿನ ವಿಚಾರಣೆ ನಡೆಸಿದ್ದು, ಅಕ್ಟೋಬರ್ 16ರಂದು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿತ್ತು. 

ನವೆಂಬರ್ 17 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರ ಅಧಿಕಾರವಧಿ ಪೂರ್ಣಗೊಳ್ಳಲಿದ್ದು, ಅಂದೇ ತೀರ್ಪು ಹೊರಬೀಳುವ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com