ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಪೂಂಚ್ ಜಿಲ್ಲ ಕೃಷ್ಣಘಾಟಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮಧ್ಯರಾತ್ರಿ 2.30ರ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com