'ಮಹಾ' ಸರ್ಕಾರ ರಚನೆ ಕಸರತ್ತು: ದೇವೇಂದ್ರ ಫಡ್ನವಿಸ್ ಇಂದು ರಾಜೀನಾಮೆ ಸಾಧ್ಯತೆ 

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಶುಕ್ರವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಶುಕ್ರವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.


13ನೇ ಮಹಾರಾಷ್ಟ್ರ ವಿಧಾನಸಭೆ ನವೆಂಬರ್ 10, 2014ರಂದು ರಚನೆಯಾಗಿತ್ತು. ಹೀಗಾಗಿ ನಾಳೆ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಅಧಿಕಾರದ ಕೊನೆಯ ದಿನವಾಗಿದೆ. ತಾಂತ್ರಿಕ ಅಂಶವಾಗಿ ಅವರು ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಬಳಿ ತೆರಳಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ನಿನ್ನೆ ಬಿಜೆಪಿ ಮತ್ತು ಶಿವಸೇನೆ ಸರ್ಕಾರ ರಚನೆ ಸಂಬಂಧ ರಾಜಿಸಂಧಾನ ಸೂತ್ರಕ್ಕೆ ಬಂದಿದೆ ಎಂದು ಹೇಳಲಾಗಿತ್ತಾದರೂ ರಾಜ್ಯಪಾಲರ ಭೇಟಿ ಬಳಿಕ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿರಲಿಲ್ಲ. ಅದಕ್ಕೆ ಸ್ಪಷ್ಟ ಬಹುಮತ ಸಿಗದಿರುವುದರಿಂದ ಅಲ್ಪಮತಗಳ ಸರ್ಕಾರ ರಚಿಸುವ ಉತ್ಸುಕತೆಯಲ್ಲಿ ಬಿಜೆಪಿ ಇಲ್ಲ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ರಾಜ್ಯಪಾಲರು, ಅಡ್ವೊಕೇಟ್ ಜನರಲ್ ಅವರ ಬಳಿ ಸರ್ಕಾರ ರಚನೆ ವಿಳಂಬದ ಬಗ್ಗೆ ಕಾನೂನು ಸಲಹೆ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com