ಅಯೋಧ್ಯೆ ತೀರ್ಪು ಬರೆದ ನ್ಯಾಯಾಧೀಶರಿಗೆ ಸಿಜೆಐ ರಂಜನ್ ಗೊಗೋಯ್ ಔತಣಕೂಟ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ಪ್ರಕಟಿಸಿದ ಸಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರಿಗೆ...
ರಂಜನ್ ಗೊಗೋಯ್
ರಂಜನ್ ಗೊಗೋಯ್

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ಪ್ರಕಟಿಸಿದ ಸಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರಿಗೆ ಶನಿವಾರ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಅಯೋಧ್ಯೆ ಭೂ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಉಚ್ಛ ನ್ಯಾಯಾಲಯ, ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಮೀನು ನೀಡಲು ತನ್ನ ತೀರ್ಪಿನಲ್ಲಿ ಆದೇಶಿಸಿದೆ.

ಈ ಮಹತ್ವದ ತೀರ್ಪು ನೀಡಿದ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ಪೀಠ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಅವರನ್ನು ಒಳಗೊಂಡಿತ್ತು.

ಸಿಜೆಐ ರಂಜನ್ ಗೊಗೋಯ್ ಅವರು ಅಯೋಧ್ಯೆ ಪೀಠದಲ್ಲಿ ನಾಲ್ವರು ನ್ಯಾಯಾಧೀಶರನ್ನು ಇಂದು ರಾತ್ರಿ ಔತಣಕೂಟಕ್ಕೆ ಕರೆದೊಯ್ಯುತ್ತಿದ್ದಾರೆ ಎನ್ನಲಾಗಿದೆ.

ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ 6ರಿಂದ 40 ದಿನಗಳ ಕಾಲ ನಿತ್ಯ ವಿಚಾರಣೆ ನಡೆಸಿದ ಪೀಠ, ಅಕ್ಟೋಬರ್ 17ರಂದು ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ದಶಕಗಳ ವಿವಾದಕ್ಕೆ ತೆರೆ ಎಳೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com