ಕರ್ತಾರ್ಪುರ ಕಾಡಿಡಾರ್: ಭಾರತ, ಪಾಕ್ ಪ್ರಧಾನಿಗಳಿಂದ ಚಾಲನೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಲಿದ್ದಾರೆ. 
ಕರ್ತಾರ್ಪುರ
ಕರ್ತಾರ್ಪುರ

ಡೇರಾ ಬಾಬ್ ನಾನಕ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರ್ವಾಲ್ ಜಿಲ್ಲೆಯಲ್ಲಿರುವ ಸಿಖ್ ಸಮುದಾಯದ ಪವಿತ್ರ ಕ್ಷೇತ್ರ ಗುರುದ್ವಾರ ದರ್ಬಾರ್ ಸಾಹಿಬ್ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಚಾಲನೆ ನೀಡಲಿದ್ದಾರೆ. 

ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ 550ನೇ ಜಯಂತಿ ಪ್ರಯುಕ್ತ ಕರ್ತಾರ್ಪುರ ಕಾರಿಡಾರ್ ಮೂಲಕ ಗುರುದ್ವಾರ ದುರ್ಬಾರ್ ಸಾಹಿಬ್ ಕ್ಷೇತ್ರದ ಭೇಟಿ ನೀಡಲಿದ್ದಾರೆ. ಮೊದಲ ಹಂತದಲ್ಲಿ ಕರ್ತಾರ್ಪುರ ಸಾಹೀಬ್'ಗೆ ತೆರಳುತ್ತಿರುವವರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಅಕಾಲ ತಕ್ತ್ ಜಠೇಂದರ್ ಸಿಂಗ್ ಬಾದಲ್, ಸುಖಬೀರ್ ಸಿಂಗ್ ಬಾದಲ್, ಹರ್ಸಿಮ್ರತ್ ಕೌರ್ ಬಾದರ್ ಹಾಗೂ ನವಜೋತ್ ಸಿಂಗ್ ಸಿಧು ಪ್ರಮುಖರು. 

ಇದೇ ವೇಳೆಗೆ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್, ತಮ್ಮ ಭಾಗದಲ್ಲಿರುವ ಕಾರಿಡಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com